Home Mangalorean News Kannada News ಪತ್ರಿಕೆಗಳ ವಿಶ್ವಾಸಾರ್ಹತೆ ಇಂದಿಗೂ ಅಚಲ: ಡಾ. ಪ್ರೇಮಾನಂದ

ಪತ್ರಿಕೆಗಳ ವಿಶ್ವಾಸಾರ್ಹತೆ ಇಂದಿಗೂ ಅಚಲ: ಡಾ. ಪ್ರೇಮಾನಂದ

Spread the love

ಪತ್ರಿಕೆಗಳ ವಿಶ್ವಾಸಾರ್ಹತೆ ಇಂದಿಗೂ ಅಚಲ: ಡಾ. ಪ್ರೇಮಾನಂದ

ಪತ್ರಿಕಾ ದಿನಾಚರಣೆಯಲ್ಲಿ ಮಂಡಿಬೆಲೆ ಶಾಮಣ್ಣ ಪ್ರಶಸ್ತಿ ಪುರಸ್ಕೃತ ಪ್ರಶಾಂತ ಪಾದೆಗೆ ಸನ್ಮಾನ

ಗ್ರಾಮೋಫೋನ್‌ನ ವಿಶಿಷ್ಟ ಉದ್ಘಾಟನೆಯೊಂದಿಗೆ ಪತ್ರಿಕಾ ದಿನಾಚರಣೆ

ಕುಂದಾಪುರ: ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ಪತ್ರಿಕಾ ಮಾಧ್ಯಮಗಳು ಜನಮುಖಿಯಾಗಿ ಪರಿಣಾಮಕಾರಿ ಪಾತ್ರ ವಹಿಸುತ್ತವೆ. ಪತ್ರಿಕೆಗಳು ನೀಡುವ ಎಚ್ಚರಿಕೆ ಹಾಗೂ ಜಾಗೃತಿ ಸಮಾಜದ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ ಎಂದು ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ ಹೇಳಿದರು.

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ಭಂಡಾರ್ಕಾರ್ಸ್ ಕಾಲೇಜಿನ ರಾಧಾಬಾಯಿ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು 70 ರ ದಶಕದ ಗ್ರಾಮೋಫೋನ್‌ನ ಧ್ವನಿಗೆ ಚಾಲನೆ ನೀಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚೆಗೆ ಹಂದಿಗಳ ಸರಣಿ ಸಾವಿನ ಕುರಿತು ಪತ್ರಿಕೆಗಳು ತೋರಿದ ಕಾಳಜಿಯನ್ನು ಶ್ಲಾಘಿಸಿದ ಅವರು, ಪತ್ರಿಕಾ ವಿತರಕರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇದರ ಪರಿಣಾಮವಾಗಿ ಪತ್ರಿಕೆಗಳ ಓದುಗರ ಸಂಖ್ಯೆಯೂ ಇಳಿಮುಖವಾಗುವ ಸಾಧ್ಯತೆ ಇದೆ. ಪತ್ರಿಕಾ ವಿತರಕರಿಗೆ ಉತ್ತೇಜನ ಹಾಗೂ ಜೀವನ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು.

ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅಧ್ಯಕ್ಷತೆ ವಹಿಸಿದ್ದರು.

ಪತ್ರಿಕಾ ದಿನಾಚರಣೆಯ ಅಂಗವಾಗಿ ಕೆಯುಡಬ್ಲ್ಯುಜೆ 2024ನೇ ಸಾಲಿನ ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಪ್ರಶಾಂತ ಪಾದೆ ಅವರನ್ನು ಅಭಿನಂದಿಸಿ ಗೌರವಿಸಲಾಯಿತು.

ಹಿರಿಯ ಪತ್ರಕರ್ತ ಹಾಗೂ ವಿಜಯ ಕರ್ನಾಟಕ ಮಂಗಳೂರು ವಿಭಾಗದ ಹಿರಿಯ ವರದಿಗಾರ ಮುಹಮ್ಮದ್ ಆರಿಫ್ ವಿಶೇಷ ಉಪನ್ಯಾಸ ನೀಡಿ, ವಿದ್ಯಾರ್ಥಿ ದಿಸೆಯಿಂದಲೇ ಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಪತ್ರಿಕೆಗಳ ಓದು ವಿಶಾಲ ಅನುಭವ ಮತ್ತು ಪ್ರಪಂಚಜ್ಞಾನವನ್ನು ನೀಡುವುದರ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಹಕಾರಿಯಾಗುತ್ತದೆ. ಪತ್ರಿಕೆಗಳನ್ನು ಉಳಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು.

ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಅನೇಕ ಹೊಸ ವಿಭಾಗಗಳು ತೆರೆದುಕೊಂಡಿವೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿಯೂ ಪತ್ರಿಕೆಗಳು ಮಹತ್ತರ ಪಾತ್ರ ವಹಿಸಿವೆ. ಪತ್ರಿಕೆಯಲ್ಲಿ ಪ್ರಕಟವಾಗುವ ಸುದ್ದಿ ಶಾಶ್ವತ ದಾಖಲೆ ಆಗುತ್ತದೆ. ಒಮ್ಮೆ ಪ್ರಕಟವಾದ ಮಾಹಿತಿ ದೀರ್ಘಕಾಲ ಪ್ರಸ್ತುತವಾಗಿರುತ್ತದೆ. ಎಲ್ಲ ವಿಷಯಗಳನ್ನು ಸಮಗ್ರವಾಗಿ, ವಸ್ತುನಿಷ್ಠವಾಗಿ ಮತ್ತು ನಿಖರವಾಗಿ ಜನರಿಗೆ ತಲುಪಿಸುವುದು ಪತ್ರಿಕಾ ಮಾಧ್ಯಮ ಮಾತ್ರ. ಆದ್ದರಿಂದ ಪತ್ರಿಕೆಗಳು ತಮ್ಮ ವಿಶ್ವಾಸಾರ್ಹತೆ ಹಾಗೂ ಮಹತ್ವವನ್ನು ಇಂದಿಗೂ ಉಳಿಸಿಕೊಂಡಿವೆ ಎಂದು ಹೇಳಿದರು.

ಸಾಮಾಜಿಕ ಜಾಲತಾಣಗಳು ಹೆಚ್ಚು ಆಕರ್ಷಕವಾಗಿದ್ದರೂ, ಧಾವಂತದಲ್ಲಿ ಪರಿಶೀಲಿಸದ ಮಾಹಿತಿಗಳನ್ನು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಆದರೆ ಸುದ್ದಿಯ ನಿಖರತೆ, ವಸ್ತುನಿಷ್ಠತೆ ಹಾಗೂ ವಿಶ್ವಾಸಾರ್ಹತೆ ಪತ್ರಿಕೆಗಳಿಂದಲೇ ದೊರೆಯುತ್ತದೆ. ಸಮಾಜದಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಬದಲಾವಣೆಗೆ ಸೇತುವೆಯಾಗುವುದು ಪತ್ರಿಕೆಗಳ ಪ್ರಮುಖ ಕೊಡುಗೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕುಂದಾಪುರ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ನಂಜಾ ನಾಯ್ಕ್, ಸಂಚಾರಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನೂಪ್ ಕುಮಾರ್, ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶುಭಕರಾಚಾರಿ, ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ. ಸರೋಜಾ ಎಂ., ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ (ಸುಜಿ ಕುರ್ಯ) ಮಾತನಾಡಿದರು.

ಜಿಲ್ಲಾ ಕಾರ್ಯದರ್ಶಿ ಟಿ. ಲೋಕೇಶ್ ಆಚಾರ್ಯ ತೆಕ್ಕಟ್ಟೆ, ಕಾರ್ಯಕಾರಿ ಸಮಿತಿ ಸದಸ್ಯರಾದ ರಾಘವೇಂದ್ರ ಪೈ, ಚಂದ್ರಮ ತಲ್ಲೂರು ಹಾಗೂ ಯೋಗೀಶ್ ಕುಂಭಾಶಿ ಉಪಸ್ಥಿತರಿದ್ದರು.

ಇತ್ತೀಚೆಗೆ ನಿಧನರಾದ ಪತ್ರಕರ್ತ ದಿ. ನಾಗೇಶ ಗಾಣಿಗ ಅವರಿಗೆ ಮೌನ ಪ್ರಾರ್ಥನೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾಲೇಜಿನ ವಿದ್ಯಾರ್ಥಿನಿಯರಾದ ಅನ್ವಿತಾ ಮತ್ತು ಅಶ್ವಿನಿ ಪ್ರಾರ್ಥನೆ ನೆರವೇರಿಸಿದರು. ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಶ್ರೀಕಾಂತ ಹೆಮ್ಮಾಡಿ ಸ್ವಾಗತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಎಸ್. ಬೀಜಾಡಿ ವಂದಿಸಿದರು. ಪತ್ರಕರ್ತೆ ಅಕ್ಷತಾ ಗಿರೀಶ್ ಕಾರ್ಯಕ್ರಮ ನಿರೂಪಿಸಿದರು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version