Home Mangalorean News Kannada News ನ.27-29: ಬ್ರಹ್ಮಾವರದಲ್ಲಿ ಮೂರು ದಿನಗಳ ‘ಉಡುಪಿ ಆಹಾರ ಮತ್ತು ಉದ್ಯಮ ಮೇಳ-2026’: ಆಹಾರೋದ್ಯಮ ರತ್ನ ಪ್ರಶಸ್ತಿ...

ನ.27-29: ಬ್ರಹ್ಮಾವರದಲ್ಲಿ ಮೂರು ದಿನಗಳ ‘ಉಡುಪಿ ಆಹಾರ ಮತ್ತು ಉದ್ಯಮ ಮೇಳ-2026’: ಆಹಾರೋದ್ಯಮ ರತ್ನ ಪ್ರಶಸ್ತಿ ಪ್ರದಾನ

Spread the love

ನ.27-29: ಬ್ರಹ್ಮಾವರದಲ್ಲಿ ಮೂರು ದಿನಗಳ ‘ಉಡುಪಿ ಆಹಾರ ಮತ್ತು ಉದ್ಯಮ ಮೇಳ-2026’: ಆಹಾರೋದ್ಯಮ ರತ್ನ ಪ್ರಶಸ್ತಿ ಪ್ರದಾನ

ಉಡುಪಿ: ಆಹಾರೋದ್ಯಮಕ್ಕೆ ಉತ್ತೇಜನ, ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ, ಯುವಜನರಿಗೆ ಸ್ವಯಂ ಉದ್ಯೋಗದ ಅವಕಾಶ ಹಾಗೂ ಕರಾವಳಿಯ ಸಾಂಪ್ರದಾಯಿಕ ಆಹಾರ ವೈವಿಧ್ಯವನ್ನು ಪರಿಚಯಿಸುವ ಉದ್ದೇಶದಿಂದ ಬ್ರಹ್ಮಾವರದಲ್ಲಿ ನವೆಂಬರ್ 27ರಿಂದ ಮೂರು ದಿನಗಳ ‘ಉಡುಪಿ ಆಹಾರ ಮತ್ತು ಉದ್ಯಮ ಮೇಳ-2026’ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಸಂಚಾಲಕರಾದ ಶ್ರೀಧರ್ ಪಿಎಸ್ ಹೇಳಿದರು.

ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಹಾಗೂ ಮಾರಾಟಗಾರರ ಸಂಘ (ರಿ.), ಬ್ರಹ್ಮಾವರ ಇದರ ಆಶ್ರಯದಲ್ಲಿ ನವೆಂಬರ್ 27ರಿಂದ 29ರವರೆಗೆ ಪ್ರತಿದಿನ ಬೆಳಿಗ್ಗೆ 10ರಿಂದ ರಾತ್ರಿ 10ರವರೆಗೆ ಬ್ರಹ್ಮಾವರದ ಗಾಂಧಿ ಮೈದಾನದಲ್ಲಿ ಮೇಳ ನಡೆಯಲಿದೆ.

ಮೇಳದಲ್ಲಿ ಆಹಾರೋದ್ಯಮಕ್ಕೆ ಸಂಬಂಧಿಸಿದ ಯಂತ್ರೋಪಕರಣಗಳ ಪ್ರದರ್ಶನ, ಪ್ರಾತ್ಯಕ್ಷಿಕೆ ಹಾಗೂ ಮಾರಾಟ ಮಳಿಗೆಗಳು, ಕರ್ನಾಟಕ ಕರಾವಳಿಯ ಸಾಂಪ್ರದಾಯಿಕ ಖಾದ್ಯಗಳ ವಿಶೇಷ ಆಹಾರ ಮಳಿಗೆಗಳು ಮತ್ತು ಗೃಹೋಪಯೋಗಿ ವಸ್ತುಗಳ ಮಳಿಗೆಗಳು ಇರಲಿವೆ. ಕೃಷಿ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಒದಗಿಸುವುದು, ವ್ಯಾಪಾರ ಸಂಪರ್ಕಗಳನ್ನು ವಿಸ್ತರಿಸುವುದು ಹಾಗೂ ಹೊಸ ಉದ್ಯಮ ಅವಕಾಶಗಳನ್ನು ಕಲ್ಪಿಸುವುದು ಮೇಳದ ಪ್ರಮುಖ ಉದ್ದೇಶವಾಗಿದೆ.

ವಿಶೇಷವಾಗಿ ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾವಂತ ನಿರುದ್ಯೋಗಿ ಯುವಕ-ಯುವತಿಯರಿಗೆ ಆಹಾರೋದ್ಯಮದಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹ ನೀಡುವ ಮೂಲಕ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಆಶಯವನ್ನು ಸಂಘ ಹೊಂದಿದೆ. ಆಹಾರೋದ್ಯಮ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ‘ಆಹಾರೋದ್ಯಮ ರತ್ನ’ ಹಾಗೂ ಉದ್ಯಮ ಕ್ಷೇತ್ರದ ಸಾಧಕರಿಗೆ ‘ಉದ್ಯಮ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಇದರೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಮನರಂಜನಾ ಆಟಗಳನ್ನೂ ಆಯೋಜಿಸಲಾಗಿದೆ.

ನ.27ರಂದು ವೈಭವದ ವಾಹನ ಜಾಥಾ, ಮೇಳದ ಉದ್ಘಾಟನೆ
ನವೆಂಬರ್ 27ರಂದು ಶುಕ್ರವಾರ ಸಂಜೆ 4.30ಕ್ಕೆ ಬ್ರಹ್ಮಾವರದ ಕುಂಜಾಲು ಸರ್ಕಲ್ನಿಂದ ವೈಭವದ ವಾಹನ ಜಾಥಾ ಆರಂಭವಾಗಲಿದೆ. ಜಾಥಾವು ಬ್ರಹ್ಮಾವರ ಹಳೆ ಬಸ್ ನಿಲ್ದಾಣದ ಮೂಲಕ ಸಾಗಿ ಗಾಂಧಿ ಮೈದಾನದಲ್ಲಿ ಸಮಾಪನಗೊಳ್ಳಲಿದೆ.

ಸಂಜೆ 6 ಗಂಟೆಗೆ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ನೃತ್ಯೋಪಾಸನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ 6.30ಕ್ಕೆ ಮೇಳದ ಉದ್ಘಾಟನಾ ಸಮಾರಂಭ ಜರುಗಲಿದೆ.

ಕರ್ನಾಟಕ ಸರ್ಕಾರದ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮೇಳವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆಹಾರೋದ್ಯಮ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಗೃಹೋಪಯೋಗಿ ವಸ್ತುಗಳ ಮಳಿಗೆಗಳನ್ನು ಉದ್ಘಾಟಿಸಲಿದ್ದು, ಸಾಯಿರಾಧ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಮನೋಹರ ಶೆಟ್ಟಿ ಅವರು ಆಹಾರ ಮೇಳಕ್ಕೆ ಚಾಲನೆ ನೀಡಲಿದ್ದಾರೆ.

ರಾತ್ರಿ 7 ಗಂಟೆಗೆ ಸಂಘದ ದಶಮಾನೋತ್ಸವ ಸಂಭ್ರಮದ ಅಂಗವಾಗಿ ‘ದಶರುಚಿ-2026’ ಸಭಾ ಕಾರ್ಯಕ್ರಮ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ದಶಮಾನೋತ್ಸವ ಸಮಿತಿ ಅಧ್ಯಕ್ಷ ಹೆರಾಲ್ಡ್ ಡಿ’ಸೋಜ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಆಹಾರೋದ್ಯಮ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ‘ಆಹಾರೋದ್ಯಮ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶ್ರೀ ಕೃಷ್ಣ ಪ್ರಸಾದ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಸಂಪತ್ ಕುಮಾರ್ ಶೆಟ್ಟಿ ಹಾಗೂ ಉಡುಪಿಯ ಆನ್ ಬೇಕರಿಯ ವಾಲ್ಟರ್ ಜೋಸೆಫ್ ಸಲ್ಡಾನ್ಹಾ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಸಹಕಾರ, ಉದ್ಯಮ, ಆಡಳಿತ ಹಾಗೂ ಸಾಮಾಜಿಕ ಕ್ಷೇತ್ರಗಳ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾತ್ರಿ 8.30ಕ್ಕೆ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ನೃತ್ಯ ಹಾಗೂ ನೃತ್ಯರೂಪಕ ಕಾರ್ಯಕ್ರಮಗಳು ನಡೆಯಲಿವೆ.

ನ.28ರಂದು ‘ದಶರುಚಿ’ ಸಿಂಹಾವಲೋಕನ ಸಭೆ
ನವೆಂಬರ್ 28ರಂದು ಶನಿವಾರ ಸಂಜೆ 5.45ಕ್ಕೆ ‘ಯಕ್ಷಗಾನ-ನಾಟ್ಯ-ಹಾಸ್ಯ’ ಸಂಚಯ ಕಾರ್ಯಕ್ರಮ ನಡೆಯಲಿದೆ.ರಾತ್ರಿ 8 ಗಂಟೆಗೆ ‘ದಶರುಚಿ’ ಸಿಂಹಾವಲೋಕನ ಸಭೆ ಆಯೋಜಿಸಲಾಗಿದೆ. ಸಂಘದ ಉಪಾಧ್ಯಕ್ಷ ಸುದೇವ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಕೋಟ ಶ್ರೀನಿವಾಸ ಪೂಜಾರಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಶಯ ನುಡಿಗಳನ್ನಾಡಲಿದ್ದಾರೆ. ಮೇಳದ ಪ್ರಧಾನ ಸಂಚಾಲಕ ಶ್ರೀಧರ್ ಪಿ.ಎಸ್. ಅವಲೋಕನ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಉದ್ಯಮ ಕ್ಷೇತ್ರದ ಸಾಧಕರಿಗೆ ‘ಉದ್ಯಮ ರತ್ನ’ ಪ್ರಶಸ್ತಿ ಪ್ರದಾನಿಸಲಾಗುವುದು. ಲಭ್ಯವಾಗಿರುವ ಮಾಹಿತಿಯಂತೆ ಮಯೂರ ಸಮೂಹ ಸಂಸ್ಥೆಗಳ ಸಿಎಂಡಿ ಶ್ರೀನಿವಾಸ ರಾವ್ ಗೋಪಾಡಿ ಹಾಗೂ ಅಲ್ಡೆಲ್ ಎಜುಕೇಶನ್ ಟ್ರಸ್ಟ್ನ ಸಂಸ್ಥಾಪಕ ಅಧ್ಯಕ್ಷರಾದ ಆಲ್ಬರ್ಟ್ ವಿಲ್ ಪ್ರೆಡ್ ಡಿಸೋಜಾಹಾಗೂ ಉದ್ಯಮ ರತ್ನ ಪ್ರಶಸ್ತಿಯನ್ನು ರೋಹನ್ ಕಾರ್ಪೊರೇಶನ್ ಮಂಗಳೂರು ಇದರ ರೋಹನ್ ಮೊಂತೆರೋ ಅವರಿಗೆ ನೀಡಲಾಗುವುದು.

ನವೆಂಬರ್ 29ರಂದು  ಸಮಾರೋಪ ಕಾರ್ಯಕ್ರಮ

ನವೆಂಬರ್ 29ರಂದು ಭಾನುವಾರ ಸಂಜೆ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಭಾಗವಹಿಸಲಿದ್ದು ಸಮಾಪನ ನುಡಿಯನ್ನು ಕಾರ್ಕಳ ಶಾಸಕ ಸುನೀಲ್ ಕುಮಾರ್ ಮಾಡಲಿದ್ದು, ಆಶಯ ನುಡಿಯನ್ನು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾಡಿದರೆ ದಿಕ್ಸೂಚಿ ಭಾಷಣವನ್ನು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಉದ್ಯಮ ರತ್ನ ಪ್ರಶಸ್ತಿಯನ್ನು ಜನತಾ ಸಮೂಹ ಸಂಸ್ಥೆ ಕೋಟ ಇದರ ಸಿಎಂಡಿ ಆನಂದ ಸಿ ಕುಂದರ್ ಅವರಿಗೆ ನೀಡಲಾಗುವುದು. ಆಹಾರೋದ್ಯಮ ಪ್ರಶಸ್ತಿಯನ್ನು ಬೆಂಗಳೂರು ಕದಂಬ ಹೊಟೇಲ್ ನ ರಾಘವೇಂದ್ರ ರಾವ್ ನೇರಂಬಳ್ಳಿ ಶಿವಸಾಗರ್ ಹೋಟೆಲ್ ಸಮೂಹದ ಪ್ರಭಾಕರ ಪೂಜಾರಿ ಹಾಗೂ ಬೆಂಗಳೂರಿನ ರೂಪಾ ಅವರಿಗೆ ಪ್ರದಾನ ಮಾಡಲಾಗುವುದು. ರಾತ್ರಿ ಉಡುಪಿ ಸರಿಗಮಪ ಪೈನಲ್ ಕಾರ್ಯಕ್ರಮ ಜರುಗಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಘಟಕರಾದ ದಿವಾಕರ ಸನೀಲ್, ವಿಶ್ವನಾಥ್, ಹೆರಾಲ್ಡ್ ಡಿಸೋಜಾ, ಸತ್ಯಪ್ರಕಾಶ್, ಶಶಿ ಕುಲಾಲ್ ಉಪಸ್ಥಿತರಿದ್ದರು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version