Spread the love
ಅ 17: ಉಚ್ಚಿಲ ದಸರಾದಲ್ಲಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಕಿನ್ನಿಪಿಲಿ ನಲಿಕೆ ಹಾಗೂ ಪೊಣ್ಣು ಪಿಲಿ ನಲಿಕೆ : ಯಶ್ಪಾಲ್ ಸುವರ್ಣ
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾ ಮಹೋತ್ಸವ ಅಂಗವಾಗಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಅಕ್ಟೋಬರ್ 17 ರಂದು ಮಧ್ಯಾಹ್ನ 12 ಗಂಟೆಯಿಂದ ಕಿನ್ನಿಪಿಲಿ ನಲಿಕೆ ಹಾಗೂ ಪೊಣ್ಣು ಪಿಲಿ ನಲಿಕೆ ಸ್ಪರ್ಧೆ ನಡೆಯಲಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಉಚ್ಚಿಲ ದಸರಾ ಮಹೋತ್ಸವದಲ್ಲಿ ಪ್ರಪ್ರಥಮ ಬಾರಿಗೆ ಕಿನ್ನಿಪಿಲಿ ನಲಿಕೆ ಸ್ಪರ್ಧೆ ಆಯೋಜಿಸಿದ್ದು, 200ಕ್ಕೂ ಮಿಕ್ಕಿ ಮಕ್ಕಳು ವಿವಿಧ ವಯೋಮಿತಿಯ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಪೊಣ್ಣು ಪಿಲಿ ನಲಿಕೆ ಸ್ಪರ್ಧೆ ತಂಡ ಹಾಗೂ ವೈಯುಕ್ತಿಕ ವಿಭಾಗದಲ್ಲಿ ನಡೆಯಲಿದೆ.
ಬ್ಯಾಂಕಿನ ವತಿಯಿಂದ ಪೂರ್ವಾಹ್ನ 9.30 ಕ್ಕೆ ಮೊಗವೀರ ಭವನದಲ್ಲಿ ಚಿತ್ರಕಲಾ ಸ್ಪರ್ಧೆಯು ವಿವಿಧ ವಿಭಾಗದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Spread the love













