ಅ. 2: ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ 125 ನೇ ವರ್ಷದ ಆಚರಣೆಗೆ ಚಾಲನೆ
ಉಡುಪಿ: ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ತಾಂಗದಗಡಿ ಪ್ರಸಕ್ತ ವರ್ಷ 125ನೇ ವರ್ಷದ ಐತಿಹಾಸಿಕ ಸಂಭ್ರಮಾಚರಣೆಗೆ ಕರಸೇವೆಯ ಮೂಲಕಅಕ್ಟೋಬರ್ 2 ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನೀಡಲಾಗುವುದು
ಶಾಲೆಯ 125 ನೇ ವರ್ಷದ ಆಚರಣೆ ಸಂದರ್ಭದಲ್ಲಿ ಹಲವು ರಚನಾತ್ಮಕ ಹಾಗೂ ಶಾಶ್ವತ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಯೋಜನೆಗಳಲ್ಲಿ ಪ್ರಮುಖವಾದದ್ದು ನಮ್ಮ ಶಾಲೆಯ ಹಳೆಯ ಕಟ್ಟಡದ ದುರಸ್ತಿ ಹಾಗೂ ನವೀಕರಣ ಕಾರ್ಯ. ಹಲವು ವರ್ಷಗಳ ಇತಿಹಾಸವನ್ನು ತನ್ನೊಳಗೆ ಉಳಿಸಿಕೊಂಡಿರುವ ಈ ಕಟ್ಟಡವನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗಳಿಗೂ ಸುರಕ್ಷಿತವಾಗಿ ಉಳಿಸುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಅಕ್ಟೊಬರ್ 2 ಶುಕ್ರವಾರದಂದು ಶಾಲಾ ಕಟ್ಟಡ ನವೀಕರಣ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ. ಕರಸೇವಾ ಕಾರ್ಯಕ್ರಮವು ಅಕ್ಟೋಬರ್ 4, ಭಾನುವಾರದವರೆಗೆ ಮುಂದುವರಿಯಲಿದೆ.
ಈ ಕರಸೇವೆ ವೇಳೆ ಹಳೆಯ ಮಾಡಿನ ಹಂಚುಗಳನ್ನು ತೆಗೆದು, ಅವುಗಳನ್ನು ವ್ಯವಸ್ಥಿತವಾಗಿ ನಿಗದಿತ ಸ್ಥಳಕ್ಕೆ ವರ್ಗಾಯಿಸುವ ಕಾರ್ಯ ನಡೆಯಲಿದ್ದು, ಹಳೆ ವಿದ್ಯಾರ್ಥಿಗಳು, ಪೋಷಕರು, ಸಂಘ-ಸಂಸ್ಥೆಗಳು, ದಾನಿಗಳು ಹಾಗೂ ಶಾಲಾ ಹಿತೈಷಿಗಳು ಭಾಗವಹಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ವಿಶೇಷ ಸಮಿತಿಯ ಕಾರ್ಯಾಧ್ಯಕ್ಷರಾದ ನಿಕಟ ಪೂರ್ವ ಶಾಸಕರಾದ ರಘುಪತಿ ಭಟ್ ಮತ್ತು ಶಾಲೆಯ ಮುಖ್ಯೋಪಾಧ್ಯಾಯರಾದ ಸಂತೋಷ್ ಕರ್ನೇಲೀಯೋ ಮನವಿ ಮಾಡಿದ್ದಾರೆ.













