Spread the love
ತುಳು ಭಾಷೆಗೆ ಅಧಿಕೃತ ಭಾಷೆಯ ಮಾನ್ಯತೆ: ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಮಂಗಳೂರು: ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಮಂಗಳೂರಿನ ಕಾಂಗ್ರೆಸ್ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಕಾಂಗ್ರೆಸ್ ಬಾವುಟದ ಜೊತೆಗೆ ತುಳುನಾಡಿನ ಧ್ವಜವೂ ರಾರಾಜಿಸಿತು. ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಘೋಷಣೆಯನ್ನು ಸ್ವಾಗತಿಸಿದ ಕಾರ್ಯಕರ್ತರು, ಪರಸ್ಪರ ಸಿಹಿ ಹಂಚಿಕೊಂಡು ಹರ್ಷ ವ್ಯಕ್ತಪಡಿಸಿದರು.
ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಬೇಕೆಂಬ ಕರಾವಳಿಯ ಬಹುದಿನಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಕಾರ್ಯಕರ್ತರು, ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.ಅಲ್ಲದೆ ದ.ಕ, ಉಡುಪಿ ಜಿಲ್ಲೆಯ ಹಲವಡೆ ಸಂಭ್ರಮಾಚರಣೆಗಳು ನಡೆಯುತ್ತಿದೆ
Spread the love













