Home Mangalorean News Kannada News ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ...

ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್ ಸುವರ್ಣ

Spread the love

ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್ ಸುವರ್ಣ

ಉಡುಪಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಸರಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 20,000 ವಿದ್ಯಾರ್ಥಿಗಳಿಗೆ ಜೂನ್ 1 ಶಾಲಾ ಪುನರಾರಂಭದಂದು ತಮ್ಮ ಪುಷ್ಟಾನಂದ ಫೌಂಡೇಶನ್ ವತಿಯಿಂದ ಸಿಹಿತಿಂಡಿ ನೀಡಿ ಸ್ವಾಗತಿಸುವುದಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಪುಷ್ಪಾನಂದ ಫೌಂಡೇಶನ್ ವತಿಯಿಂದ ಜೂನ್ 1 ರಂದು ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 125 ಶಾಲೆಯ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಶಾಲಾ ಪುನರಾರಂಭದ ಅಂಗವಾಗಿ ಉಡುಪಿ ಕ್ಷೇತ್ರದ ವಿವಿಧ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಣ ಪ್ರೇಮಿಗಳು ತಮ್ಮ ವ್ಯಾಪ್ತಿಯ ಶಾಲೆಗಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳ ಸಂಭ್ರಮಕ್ಕೆ ಸಾಕ್ಷಿಯಾಗುವಂತೆ ಮನವಿ ಮಾಡಿದ್ದಾರೆ.


Spread the love

Exit mobile version