Home Mangalorean News Kannada News ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ದಂಧೆ: ಹಂಗಾರಕಟ್ಟೆ ಯುವಕನ ಬಂಧನ

ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ದಂಧೆ: ಹಂಗಾರಕಟ್ಟೆ ಯುವಕನ ಬಂಧನ

Spread the love

ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ದಂಧೆ: ಹಂಗಾರಕಟ್ಟೆ ಯುವಕನ ಬಂಧನ

ಐಫೋನ್ ಹಾಗೂ ನಗದು ವಶ – ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಕೋಟ: ವರ್ಲ್ಡ್ ಕಪ್ ಟಿ–20 ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿ ಸಾರ್ವಜನಿಕರನ್ನು ಸೇರಿಸಿ ಹಣ ಸಂಗ್ರಹಿಸಿ ಅಕ್ರಮವಾಗಿ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಯುವಕನನ್ನು ಕೋಟ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಫೆಬ್ರವರಿ 9ರಂದು ಪಾಂಡೇಶ್ವರ ಗ್ರಾಮದ ಕೋಸ್ಟಲ್ ಪ್ಯಾರಡೈಸ್ ಹೋಟೆಲ್ ಬಳಿ ಪಾಂಡೇಶ್ವರ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬನು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ, ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರವೀಣ್ ಕುಮಾರ್ ಆರ್. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದರು. ಈ ವೇಳೆ ಬೆಟ್ಟಿಂಗ್ ಆಡುತ್ತಿದ್ದ ಸಾರ್ವಜನಿಕರು ಪರಾರಿಯಾಗಿದ್ದು, ಬೆಟ್ಟಿಂಗ್ ನಡೆಸುತ್ತಿದ್ದ ಮನಿತ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿತನಿಂದ ಕ್ರಿಕೆಟ್ ಬೆಟ್ಟಿಂಗ್‌ಗೆ ಬಳಸುತ್ತಿದ್ದ ಐಫೋನ್ ಮೊಬೈಲ್ ಹಾಗೂ ರೂ.800 ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿತ ಮನಿತ್ ಸಂಘಟಿತವಾಗಿ ಇತರರೊಂದಿಗೆ ಸೇರಿಕೊಂಡು, ಪ್ರಸ್ತುತ ನಡೆಯುತ್ತಿರುವ ಓಮನ್ ಹಾಗೂ ಜಿಂಬಾಬ್ವೆ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿ ತನ್ನ ಮೊಬೈಲ್‌ನಲ್ಲಿರುವ PARKKER777 ಆನ್‌ಲೈನ್ ಅಪ್ಲಿಕೇಶನ್ ಮೂಲಕ ಅಕ್ರಮವಾಗಿ ಬೆಟ್ಟಿಂಗ್ ನಡೆಸುತ್ತಿದ್ದನೆಂದು ತನಿಖೆಯಿಂದ ತಿಳಿದುಬಂದಿದೆ.

ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 21/2026 ಅಡಿ, ಬಿಎನ್‌ಎಸ್ ಕಲಂ 112, ಕೆಪಿ ಆಕ್ಟ್ ಕಲಂ 78(i)(iii) ಹಾಗೂ ಐಟಿ ಆಕ್ಟ್ ಕಲಂ 66ರಂತೆ ಪ್ರಕರಣ ದಾಖಲಿಸಲಾಗಿದೆ.

ಬಂಧಿತ ಆರೋಪಿತನನ್ನು ಮನಿತ್ (26), ತಂದೆ ಮಾಧವ ಪುತ್ರನ್, ಹಂಗಾರಕಟ್ಟೆ ಬಾಳ್ಕುದ್ರು ಗ್ರಾಮ, ಬ್ರಹ್ಮಾವರ ತಾಲೂಕು ನಿವಾಸಿ ಎಂದು ಗುರುತಿಸಲಾಗಿದೆ. ಆರೋಪಿತನನ್ನು ದಸ್ತಗಿರಿ ಮಾಡಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದಾಗಿದೆ.


Spread the love

Exit mobile version