ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಸ್ಕರ್ ಫೆರ್ನಾಂಡಿಸ್ ಪುಣ್ಯಸ್ಮರಣೆ
ಕುಂದಾಪುರ: ಮಾಜಿ ಕೇಂದ್ರ ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಪುಣ್ಯಸ್ಮರಣೆಯನ್ನು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸೆಪ್ಟೆಂಬರ್ 13ರಂದು ಆಚರಿಸಲಾಯಿತು.
ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆದೂರು ಸದಾನಂದ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಎನ್‌ಎಸ್‌ಯುಐ ಸದಸ್ಯರು ಭಾಗವಹಿಸಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆದೂರು ಸದಾನಂದ ಶೆಟ್ಟಿಯವರು ಮಾತನಾಡಿ, ಆಸ್ಕರ್ ಫೆರ್ನಾಂಡಿಸ್ ಅವರು ಉಡುಪಿ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು. ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ಬಗ್ಗೆ ಆಸ್ಕರ್ ಅವರು ಹೊಂದಿದ್ದ ಕಾಳಜಿಯನ್ನು ವಿವರಿಸಿದರು.
ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಹಾಗೂ ಬ್ಲಾಕ್ ಮಾಜಿ ಪ್ರಧಾನ ಕಾರ್ಯದರ್ಶಿ ನಾರಾಯಣಾಚಾರ್ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದ ಸಂಘಟನೆಗೆ ಆಸ್ಕರ್ ಫೆರ್ನಾಂಡಿಸ್ ಅವರು ನೀಡಿದ ಕೊಡುಗೆ ಹಾಗೂ ಕಾರ್ಯಕರ್ತರೊಂದಿಗೆ ಅವರು ಹೊಂದಿದ್ದ ಆತ್ಮೀಯತೆಯನ್ನು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಸೋಶಿಯಲ್ ಮೀಡಿಯಾ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ರೇವತಿ ಸಂಪತ್ ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಶೇರುಗಾರ ಹಾಗೂ ಯುವ ಕಾಂಗ್ರೆಸ್ ಕುಂದಾಪುರ ಬ್ಲಾಕ್ ಅಧ್ಯಕ್ಷ ಅಭಿಜಿತ್ ಪೂಜಾರಿ ಉಪಸ್ಥಿತರಿದ್ದರು.
ಸಭೆಯಲ್ಲಿ ಪಕ್ಷದ ವಿವಿಧ ಘಟಕಗಳ ಮುಖಂಡರಾದ ರಿಯಾಜ್ ಕೋಡಿ, ಜೋಸೆಫ್ ರೆಬೆಲ್ಲೋ, ನ್ಯಾಯವಾದಿ ವಿವೇಕ್ ಕುಂದಾಪುರ, ಮಧುಕರ ಬರೆಕಟ್ಟು, ಅಡಾಲ್ಫ್ ಡಿಕೋಸ್ಟಾ, ಸದಾನಂದ ಖಾರ್ವಿ, ಕುಮಾರ ಖಾರ್ವಿ, ಆಶಾ ಕರ್ವಾಲೋ, ಪ್ರಭಾವತಿ ಶೆಟ್ಟಿ, ಶ್ರೀದರ್ ಶೇರುಗಾರ, ಕ್ಲಿಫರ್ಡ್ ಡಿಸಿಲ್ವಾ, ಶಿವಕುಮಾರ್ ಪೂಜಾರಿ, ದಿನೇಶ್ ಬೆಟ್ಟ, ಸವಿತಾ ಆನಗಳ್ಳಿ, ವಿ. ಗಣೇಶ್, ಸುಜನ್ ಹಾಗೂ ಗಣೇಶ್ ಶೆಟ್ಟಿ ಉಪಸ್ಥಿತರಿದ್ದರು.
ಸಭೆಯಲ್ಲಿ ಆಸ್ಕರ್ ಫೆರ್ನಾಂಡಿಸ್ ಅವರ ರಾಜಕೀಯ ಜೀವನ, ಕಾಂಗ್ರೆಸ್ ಪಕ್ಷದ ಸಂಘಟನೆಗೆ ಅವರು ನೀಡಿದ ಕೊಡುಗೆ ಹಾಗೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಸಲ್ಲಿಸಿದ ಸೇವೆಯನ್ನು ಸ್ಮರಿಸಲಾಯಿತು. ಮುಖಂಡರು ಹಾಗೂ ಕಾರ್ಯಕರ್ತರು ಆಸ್ಕರ್ ಫೆರ್ನಾಂಡಿಸ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.
ವಿನೋದ್ ಕ್ರಾಸ್ತಾ ಕಾರ್ಯಕ್ರಮ ನಿರೂಪಿಸಿದರು. ಅರುಣ್ ಪಟೇಲ್ ವಂದನಾರ್ಪಣೆ ಸಲ್ಲಿಸಿದರು.













