ದಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಪೂಜಾರಿ ನೇಮಕ
ಮಂಗಳೂರು: ದಕ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಪೂಜಾರಿ ಅವರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಬುಧವಾರ ಆದೇಶ ಹೊರಡಿಸಿದೆ.
ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದು ಈ ಹಿಂದೆ ಪದ್ಮರಾಜ್ ಅವರು ದಕ ಜಿಲ್ಲಾ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದರು.
ವೃತ್ತಿಯಲ್ಲಿ ವಕೀಲರಾಗಿರುವ ಪದ್ಮರಾಜ್ ಬಿಲ್ಲವ ಸಮುದಾಯದ ನಾಯಕರಾಗಿದ್ದು ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಖಜಾಂಚಿಯಾಗಿ ಸೇವಾಕಾರ್ಯಗಳಲ್ಲಿ ತೊಡಗಿಸಿಕೊಂಡಿರುತ್ತಾರೆ.
