ಶಿರೂರು ಪರ್ಯಾಯದಲ್ಲಿ ಭಾಗವಹಿಸುವಿಕೆ ಯಾವುದೇ ರಾಜಕೀಯ ಪ್ರೇರಿತವಲ್ಲ : ಜಿಲ್ಲಾಧಿಕಾರಿ ಸ್ವರೂಪ ಟಿಕೆ ಸ್ಪಷ್ಟನೆ
ಉಡುಪಿ: ಶಿರೂರು ಪರ್ಯಾಯ ಮಹೋತ್ಸವದ ವೇಳೆ ನಗರಸಭೆಯ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವ ಹಿನ್ನಲೆಯಲ್ಲಿ ಸದರಿ ಪುರಪ್ರವೇಶ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿರುತ್ತೇನೆ ಹೊರತು ಯಾವುದೇ ರಾಜಕೀಯ ಪ್ರೇರಿತ ಭಾಗವಹಿಸುವಿಕೆ ಅಲ್ಲ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿಕೆ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು ದಿನಾಂಕ 18.01.2026 ರಂದು ಭಾನುವಾರ ಬೆಳ್ಳಿಗೆ 3.00 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠದ ಪ್ರತಿ 2 ವರ್ಷಕ್ಕೊಮ್ಮೆ ನಡೆಯುವ ಪರ್ಯಾಯೋತ್ಸವ ಕಾರ್ಯಕ್ರಮದ ಅಂಗವಾಗಿ ಸ್ವಾಮೀಜಿಯವರ ಪುರ ಪ್ರವೇಶ ಕಾರ್ಯಕ್ರಮಕ್ಕೆ ಉಡುಪಿ ನಗರ ಸಭೆಯ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವ ಹಿನ್ನಲೆಯಲ್ಲಿ ಸದರಿ ಪುರಪ್ರವೇಶ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿರುತ್ತೇನೆ. ಅದೇ ರೀತಿ ನೂತನ ಯತಿಗಳಿಗೆ ಪೌರ ಸನ್ಮಾನ ಹಾಗೂ ಸರ್ವಜ್ಞ ಪೀಠ ಏರಿದ ನಂತರ ನಡೆಯುವ ದರ್ಬಾರು ಕಾರ್ಯಕ್ರಮದಲ್ಲಿ ಭಾಗವಹಿಸಿರುತ್ತೇನ ವಿನಹ ಯಾವುದೇ ರಾಜಕೀಯ ಪ್ರೇರಿತ ಭಾಗವಹಿಸುವಿಕೆ ಆಗಿರುವುದಿಲ್ಲ ಎಂಬ ವಿಚಾರವನ್ನು ಸಾರ್ವಜನಿಕರ ಗಮನಕ್ಕೆ ತರಬಯಸುತ್ತೇನೆ ಎಂದು ಹೇಳಿದ್ದಾರೆ.