ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ: ಸಿಎಂ ಡಿ ಕೆ ಶಿವಕುಮಾರ್
ಮಂಗಳೂರು: “ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ. ಯಾವುದೇ ಪಕ್ಷದ ನಾಯಕರು ಗಾಬರಿಯಾಗುವ ಅಗತ್ಯವಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಮಂಗಳೂರಿನಲ್ಲಿ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.
“ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆ ಮೇಲೆ ರಾಜಕೀಯ ಮಾಡಲ್ಲ. ಎಲ್ಲರ ಚಿಂತನೆಯಂತೆ ನಮ್ಮ ಸರ್ಕಾರ ಕೆಲಸ ಮಾಡಲಿದೆ” ಎಂದು ಭರವಸೆ ನೀಡಿದರು.
“ಗಾಂಧಿ ಅವರು ಉಳಿದುಕೊಂಡಿದ್ದ ಮನೆಗೆ ಹೋಗಿ ಅಲ್ಲಿ ಉಪಹಾರ ಸೇವಿಸಿದೆ. ಮಂಗಳೂರು ಬನ್ಸ್, ದೋಸೆ ಸವಿದೆ. ಜಿಲ್ಲಾಮಂತ್ರಿಗಳು ಎಲ್ಲಿ ಕರೆದುಕೊಂಡು ಹೋಗುತ್ತಾರೊ ಅಲ್ಲಿಗೆ ಹೋಗುವೆ” ಎಂದು ಹೇಳಿದರು.
