ಕೆಲಸಕ್ಕೆಂದು ಹೋದವರು ಮನೆಗೆ ವಾಪಾಸ್ಸು ಬಾರದೆ ಕಾಣೆ: ಪತ್ತೆಗೆ ಮನವಿ
ಮಂಗಳೂರು: ಅರ್ಚನಾ (35) ಎಂಬವರು ಕೆಲಸಕ್ಕೆಂದು ಹೋದವರು ಮನೆಗೆ ವಾಪಾಸ್ಸು ಬಾರದೆ ಸೆಪ್ಟೆಂಬರ್ 17 ರಂದು ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರು ರಾಘವೇಂದ್ರ (42) ಎಂಬವರೊಂದಿಗೆ ಹೋಗಿರುವುದಾಗಿ ತಿಳಿದು ಬಂದಿರುತ್ತದೆ.
ಕಾಣೆಯಾದವರ ಚಹರೆ: ಎತ್ತರ 5 ಅಡಿ, ದುಂಡು ಮುಖ, ದಪ್ಪ ಶರೀರ, ಬಿಳಿ ಮೈಬಣ್ಣ ಹೊಂದಿರುತ್ತಾರೆ. ಕಾಣೆಯಾದ ದಿನ ಬಿಳಿ ಬಣ್ಣದ ಚುಕ್ಕೆಗಳಿರುವ ಚೂಡಿದಾರ ಧರಿಸಿದ್ದರು. ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾರೆ.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಸುರತ್ಕಲ್ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
