Home Mangalorean News Kannada News ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: ಮದ್ಯದ ಲೋಡ್ ತುಂಬಿದ್ದ ಲಾರಿ ಪಲ್ಟಿ, ಚಾಲಕನಿಗೆ ಗಾಯ 

ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: ಮದ್ಯದ ಲೋಡ್ ತುಂಬಿದ್ದ ಲಾರಿ ಪಲ್ಟಿ, ಚಾಲಕನಿಗೆ ಗಾಯ 

Spread the love

ಕಡಬ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ನೆಲ್ಯಾಡಿ ಗ್ರಾಮದ ಬೆಥನಿ ಕಾಲೇಜು ಬಳಿ ರವಿವಾರ (ಸೆ.20) ಮುಂಜಾನೆ ಸರಣಿ ಅಪಘಾತ ಸಂಭವಿಸಿದ್ದು, ಮದ್ಯದ ಲೋಡ್ ತುಂಬಿದ್ದ ಲಾರಿಯೊಂದು ಪಲ್ಟಿಯಾಗಿದೆ. ಚಾಲಕನ ದುಡುಕು ಹಾಗೂ ನಿರ್ಲಕ್ಷ್ಯದ ಚಾಲನೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದು, ಘಟನೆಯಲ್ಲಿ ಮೂರು ವಾಹನಗಳು ಜಖಂಗೊಂಡಿವೆ.

ಬೆಂಗಳೂರು ನೆಲಮಂಗಲ ನಿವಾಸಿ ರಾಜ ಎಂ. (56) ಅವರಿಗೆ ಸೇರಿದ ಮದ್ಯದ ಲೋಡ್ ತುಂಬಿದ್ದ ಲಾರಿಯು ಸಕಲೇಶಪುರ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿತ್ತು. ಇದೇ ಮಾರ್ಗದಲ್ಲಿ ಶಮೀರ್ ಎಂಬವರು ಚಲಾಯಿಸುತ್ತಿದ್ದ ಮತ್ತೊಂದು ಲಾರಿ ಹಿಂಬದಿಯಿಂದ ಬಂದು ಮದ್ಯದ ಲಾರಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮದ್ಯದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಉಜ್ಜಿಕೊಂಡು ರಸ್ತೆಯ ಎಡಬದಿಗೆ ಪಲ್ಟಿಯಾಗಿದೆ

ಅಪಘಾತದ ತೀವ್ರತೆಗೆ ಮದ್ಯದ ಲಾರಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯದ ಬಾಟಲಿಗಳು ಹಾಗೂ ವಾಹನಗಳು ಜಖಂಗೊಂಡಿವೆ. ಘಟನೆಯಲ್ಲಿ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಥಳಕ್ಕೆ ನೆಲ್ಯಾಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಲಾರಿ ಮಾಲೀಕ ರಾಜ ಎಂ. ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version