ಪೋಕ್ಸೋ ಪ್ರಕರಣ: ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Spread the love

ಪೋಕ್ಸೋ ಪ್ರಕರಣ: ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ನೆಲ್ಯಾಡಿಯಲ್ಲಿ ಉಪ್ಪಿನಂಗಡಿ ಪೊಲೀಸರ ಕಾರ್ಯಾಚರಣೆ; ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನ್ಯಾಯಾಲಯ

ಉಪ್ಪಿನಂಗಡಿ: ಪೋಕ್ಸೋ ಪ್ರಕರಣವೊಂದರಲ್ಲಿ ವಿಚಾರಣೆಗೆ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್‌ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 18/2005, ಕಲಂ 4, 6 ಪೋಕ್ಸೋ ಕಾಯ್ದೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೌಕ್ರಾಡಿ ನಿವಾಸಿ ರಮೇಶ್ ಎಂಬಾತನ ವಿರುದ್ಧ ವಾರಂಟ್ ಜಾರಿಯಾಗಿತ್ತು.

ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿ ಹೆಡ್ ಕಾನ್‌ಸ್ಟೆಬಲ್ 508 ದಯಾನಂದ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ 453 ರವಿರಾಜ್ ಅವರು ಸೆಪ್ಟೆಂಬರ್ 10ರಂದು ನೆಲ್ಯಾಡಿಯಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಳಿಕ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


Spread the love
Subscribe
Notify of

0 Comments