Home Mangalorean News Kannada News ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ; ಭದ್ರತೆ ಬಿಗಿಗೊಳಿಸಿದ ಪೊಲೀಸರು

ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ; ಭದ್ರತೆ ಬಿಗಿಗೊಳಿಸಿದ ಪೊಲೀಸರು

Spread the love

ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ; ಭದ್ರತೆ ಬಿಗಿಗೊಳಿಸಿದ ಪೊಲೀಸರು

ಪುತ್ತೂರು: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಹಾಗೂ ಭದ್ರತಾ ಭಾವನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಗಸ್ಟ್ 24, 2026ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪಥಸಂಚಲನ ನಡೆಸಲಾಯಿತು.

ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಸಹಜವಾಗಿ ಬಹುತೇಕ ಅಂಗಡಿಗಳು ಮುಚ್ಚಿರುತ್ತವೆ. ಇದರ ಹೊರತಾಗಿ ಯಾವುದೇ ಅಂಗಡಿ-ಮುಂಗಟ್ಟುಗಳನ್ನು ಬಲವಂತವಾಗಿ ಬಂದ್ ಮಾಡಿಸುವುದಕ್ಕೆ ಆಸ್ಪದ ನೀಡದಂತೆ ಅಗತ್ಯ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

ಪುತ್ತೂರಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು, ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಆದರೆ ಪೊಲೀಸರು ಪ್ರಕರಣವನ್ನು ಲಘುವಾಗಿ ಪರಿಗಣಿಸುತ್ತಿದ್ದಾರೆ ಎಂಬ ವದಂತಿಗಳು ಹರಡುತ್ತಿದ್ದು, ಇದು ಸತ್ಯಕ್ಕೆ ದೂರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿಂದೆಯೂ ಹಲವು ಪ್ರಕರಣಗಳಲ್ಲಿ ಜಾತಿ, ಧರ್ಮ ಅಥವಾ ರಾಜಕೀಯ ಪ್ರಭಾವಗಳನ್ನು ಪರಿಗಣಿಸದೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಈ ಕುರಿತು ಯಾರಿಗಾದರೂ ಚರ್ಚಿಸಲು ಅಥವಾ ಮಾಹಿತಿ ಪಡೆಯಲು ಇಚ್ಛೆಯಿದ್ದಲ್ಲಿ ಮುಕ್ತವಾಗಿ ಚರ್ಚಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.


Spread the love

Exit mobile version