Spread the love
ಖೋಟಾ ನೋಟು ತಯಾರಿಸುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ: ಏಳು ಮಂದಿಯ ಬಂಧನ
ಉಪ್ಪಿನಂಗಡಿ: ಖೋಟಾ ನೋಟು ತಯಾರಿಸುತ್ತಿದ್ದ ಸ್ಥಳಕ್ಕೆ ಬುಧವಾರ ತಡರಾತ್ರಿ ದಾಳಿ ನಡೆಸಿರುವ ಉಪ್ಪಿನಂಗಡಿ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕಣಿಯೂರು ಗ್ರಾಮ ಪದ್ಮುಂಜ, ಕೊರಿಂಜ ಸಮೀಪದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಆಧರಿಸಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಖೋಟಾನೋಟು ತಯಾರಿಸಲು ಬಾಡಿಗೆ ಕಟ್ಟಡ ಒದಗಿಸಿದ ಸ್ಥಳೀಯ ವ್ಯಕ್ತಿಯೊಬ್ಬನ ಸಹಿತ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಒಂದು ಬದಿ ಪ್ರಿಂಟ್ ಮಾಡಿರುವ ಖೋಟಾನೋಟು, ಖೋಟಾನೋಟು ತಯಾರಿಕೆಗೆ ಬಳಸುತ್ತಿದ್ದ ಯಂತ್ರವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Spread the love













