Home Mangalorean News Kannada News ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸಹಿತ ನಾಲ್ವರು ಆರೋಪಿಗಳ ಬಂಧನ

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸಹಿತ ನಾಲ್ವರು ಆರೋಪಿಗಳ ಬಂಧನ

Spread the love

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸಹಿತ ನಾಲ್ವರು ಆರೋಪಿಗಳ ವಶಕ್ಕೆ

ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು ಉತ್ತರ ಪ್ರದೇಶದ ಪವನ್ ಕುಮಾರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಪ್ರಕರಣದ ಆರೋಪಿಗಳ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಅವರ ಮಾರ್ಗದರ್ಶನದಲ್ಲಿ, ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಬ್ರಹ್ಮಾವರ ವೃತ್ತ ನಿರೀಕ್ಷಕರ ವಿಶೇಷ ತಂಡವನ್ನು ರಚಿಸಲಾಗಿತ್ತು.

ಈ ತಂಡದ ಸಿಬ್ಬಂದಿ ನವೆಂಬರ್ 3ರಂದು ಮಧ್ಯಪ್ರದೇಶಕ್ಕೆ ತೆರಳಿ ಭೋಪಾಲ್ ರೈಲ್ವೆ ನಿಲ್ದಾಣದ ಬಳಿ ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯ ಪತ್ರಾವನದ ಸುಖ್ಪುರ, ಬಂಗಾಲಿ ಪಟ್ಟಿಯ ನಿವಾಸಿ ಪವನ್ ಕುಮಾರ್ (24) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ವಶಕ್ಕೆ ಪಡೆದಿದ್ದರು. ಪವನ್ ಕುಮಾರ್ನನ್ನು ನವೆಂಬರ್ 5ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಸುರಕ್ಷತೆಯ ದೃಷ್ಟಿಯಿಂದ ಪರಿವೀಕ್ಷಣಾಲಯದಲ್ಲಿ ಇರಿಸಲಾಗಿದೆ.

ಪ್ರಕರಣದ ಉಳಿದ ಆರೋಪಿಗಳಾದ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮುನಿಯಾಲು, ವೀರ ಸಾವರ್ಕರ್ ನಗರದ ಗಾಂಧಿ ಮೈದಾನದ ಬಳಿಯ ನಿವಾಸಿ ಆದರ್ಶ ಕಾಂಚನ್ ಹಾಗೂ ಕಾರ್ಕಳ ತಾಲೂಕಿನ ವರಂಗ ಗ್ರಾಮದ ಮುನಿಯಾಲು ಅಂಚೆಯ ದಿನೇಶ್ ಶೆಟ್ಟಿ ಅವರನ್ನು ನವೆಂಬರ್ 7ರ ರಾತ್ರಿ ಕಾರ್ಕಳದಲ್ಲಿ ವಶಕ್ಕೆ ಪಡೆಯಲಾಗಿದೆ.

ಹಿರಿಯಡ್ಕ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಉಪನಿರೀಕ್ಷಕಿ ಮುಕ್ತಾಬಾಯಿ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿ, ಪ್ರಕರಣದ ತನಿಖಾಧಿಕಾರಿಯಾಗಿರುವ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ಮುಂದೆ ಹಾಜರುಪಡಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version