ಜನರ ಮನೆಬಾಗಿಲಿಗೆ ಸರಕಾರ ಕೊಂಡೊಯ್ಯಲು ಪ್ರಜಾಸೇವೆ ಸ್ಥಾಪನೆ: ಸಚಿವ ಯು.ಟಿ ಖಾದರ್

Spread the love

ಜನರ ಮನೆಬಾಗಿಲಿಗೆ ಸರಕಾರ ಕೊಂಡೊಯ್ಯಲು ಪ್ರಜಾಸೇವೆ ಸ್ಥಾಪನೆ: ಸಚಿವ ಯು.ಟಿ ಖಾದರ್

ಮಂಗಳೂರು: ಜನರ ಮಧ್ಯೆಯೇ ಆಡಳಿತ ಮತ್ತು ಸರ್ಕಾರ ಇರಬೇಕು ಹಾಗೂ ಎಲ್ಲ ಇಲಾಖೆಗಳ ಸೇವೆಗಳನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ಯಬೇಕು ಎಂಬ ಆಶಯದೊಂದಿಗೆ ಪ್ರಜಾ ಸೇವಾ ಕಾರ್ಯಕ್ರಮವನ್ನು ಆರಂಭಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹೇಳಿದರು.

ಅವರು ಶನಿವಾರ ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿಯೇ ಪ್ರಜಾ ಸೇವೆಗೆ ಸಂಬಂಧಿಸಿದ ಪ್ರತ್ಯೇಕ ಇಲಾಖೆಯು ಕರ್ನಾಟಕದಲ್ಲಿ ಇದ್ದು, ಈ ಕಾರ್ಯಕ್ರಮವು ಇತರೆ ದೇಶಗಳಿಗೂ ಮಾದರಿಯಾಗಲಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು, ಅವುಗಳಿಗೆ ಸೂಕ್ತ ಪರಿಹಾರ ಒದಗಿಸಲು ಅಧಿಕಾರಿಗಳು ಮುಂದಾಗಬೇಕು. ರಾಜ್ಯಮಟ್ಟದಲ್ಲಿ ನಿರ್ಧಾರ ಕೈಗೊಳ್ಳಬೇಕಾದ ವಿಷಯಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ಅವುಗಳ ಅನುμÁ್ಠನಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.

ಆಡಳಿತ ವ್ಯವಸ್ಥೆಯನ್ನು ಚುರುಕುಗೊಳಿಸಿ, ಸಾರ್ವಜನಿಕರ ಕೆಲಸಗಳನ್ನು ಸಾಧ್ಯವಾದಷ್ಟು ಶೀಘ್ರವಾಗಿ ಪೂರ್ಣಗೊಳಿಸುವುದೇ ಪ್ರಜಾ ಸೇವೆಯ ಪ್ರಮುಖ ಉದ್ದೇಶವಾಗಿದೆ. ಸಮಗ್ರ ಅಭಿವೃದ್ಧಿಗೆ ಉತ್ತೇಜನ ನೀಡುವುದು, ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸುವುದು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಪ್ರಜಾ ಸೇವೆಯ ಮುಖ್ಯ ಆಶಯವಾಗಿದೆ. ಗ್ರಾಮೀಣ ಭಾಗದ ಜನರ ಕುಂದುಕೊರತೆಗಳಿಗೆ ಸ್ಪಂದಿಸಿ, ಅವರ ಬೇಡಿಕೆಗಳಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜನರು ಮತ್ತು ಸರ್ಕಾರದ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುವ ಮೂಲಕ ಪರಿಹಾರ ಒದಗಿಸಬೇಕು ಎಂದು ಹೇಳಿದರು.

ಸಚಿವರು ಜಿಲ್ಲಾ ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಸಾರ್ವಜನಿಕರ ವಿವಿಧ ಸಮಸ್ಯೆಗಳು ಹಾಗೂ ಬೇಡಿಕೆ, ಅಹವಾಲುಗಳನ್ನು ಸ್ವೀಕರಿಸಿ ಅವರ ಸಮಸ್ಯೆಗಳನ್ನು ಆಲಿಸಿದರು.

ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಮಾತನಾಡಿ, ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಕುಂದುಕೊರತೆಗಳು ಮತ್ತು ದೀರ್ಘಕಾಲದಿಂದ ಬಗೆಹರಿಯದೆ ಉಳಿದಿರುವ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಲು ಪ್ರಜಾ ಸೇವೆ ಆಂದೋಲನ ಉತ್ತಮ ವೇದಿಕೆಯಾಗಿದೆ. ಸಾರ್ವಜನಿಕರು ತಮ್ಮ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈ ವೇದಿಕೆಯ ಮೂಲಕ ನೇರವಾಗಿ ಅಧಿಕಾರಿಗಳ ಗಮನಕ್ಕೆ ತರಬಹುದಾಗಿದ್ದು, ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲುಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷೆ ಸುರೇಖಾ ಚಂದ್ರಹಾಸ್, ಉಳ್ಳಾಲ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ರಫೀಕ್, ಪೆÇಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಪೆÇಲೀಸ್ ಅಧೀಕ್ಷಕ ಡಾ.ಅರುಣ್ ಕೆ, ಮಹಾನಗರಪಾಲಿಕೆ ಆಯುಕ್ತ ರಾಹುಲ್ ರತ್ನಮ್ ಪಾಂಡೆ, ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪೆÇ್ರ.ಪಿ.ಎಲ್ ಧರ್ಮ, ಜಿಲ್ಲಾ ಅರಣ್ಯ ಅಧಿಕಾರಿ ರವಿಶಂಕರ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಇದ್ದರು.
ಮಂಗಳೂರು ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಸ್ವಾಗತಿಸಿದರು.


Spread the love
Subscribe
Notify of

0 Comments