ಬಿಜೆಪಿ ರಾಷ್ಟ್ರೀಯ ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ
ಉಡುಪಿ: ಭಾರತೀಯ ಜನತಾ ಪಕ್ಷದ ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬೀನ್ ಶನಿವಾರ ಆದೇಶ ಹೊರಡಿಸಿದ್ದಾರೆ.
2013 ರಿಂದ 2018 ರವರೆಗೆ ಉಡುಪಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಮೇ 7, 2022 ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದರು.
