Home Mangalorean News Kannada News ಬಾಳೆ ಮುಹೂರ್ತ ಹಾಗೂ ‘ಕದಳೀ ವಿಶ್ವದರ್ಶನ’ ಸೋದೆ ಮಠದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಮನ್ವಯ ಸಭೆ 

ಬಾಳೆ ಮುಹೂರ್ತ ಹಾಗೂ ‘ಕದಳೀ ವಿಶ್ವದರ್ಶನ’ ಸೋದೆ ಮಠದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಮನ್ವಯ ಸಭೆ 

Spread the love

ಬಾಳೆ ಮುಹೂರ್ತ ಹಾಗೂ ‘ಕದಳೀ ವಿಶ್ವದರ್ಶನ’ ಸೋದೆ ಮಠದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಮನ್ವಯ ಸಭೆ 

ಉಡುಪಿ: ಸೋದೆ ಶ್ರೀ ವಾದಿರಾಜ ಮಠದ ಪರಮಪೂಜ್ಯ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರ ದ್ವಿತೀಯ ಶ್ರೀಕೃಷ್ಣ ಪೂಜಾ ಪರ್ಯಾಯದ ಪೂರ್ವಭಾವಿ ಸಿದ್ಧತೆಗಳ ಅಂಗವಾಗಿ, ನವೆಂಬರ್ 29ರಂದು ಪ್ರಥಮ ಮುಹೂರ್ತವಾದ ಬಾಳೆ ಮುಹೂರ್ತ ನೆರವೇರಲಿದೆ. ಇದೇ ಸಂದರ್ಭದಲ್ಲಿ ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ಉಡುಪಿಯ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ‘ಕದಳೀ ವಿಶ್ವದರ್ಶನ’ ಬಾಳೆ ಮೇಳ ಆಯೋಜಿಸಲಾಗಿದೆ.

ಈ ಕಾರ್ಯಕ್ರಮಗಳ ಯಶಸ್ವಿ ಹಾಗೂ ಸುಗಮ ನಿರ್ವಹಣೆಯ ಉದ್ದೇಶದಿಂದ ಸೋದೆ ಶ್ರೀ ವಾದಿರಾಜ ಮಠದಲ್ಲಿ ಶ್ರೀಪಾದರ ಅಧ್ಯಕ್ಷತೆಯಲ್ಲಿ ಹಾಗೂ ಉಡುಪಿ ಶಾಸಕ   ಯಶ್‌ಪಾಲ್ ಸುವರ್ಣ ಅವರ ಉಪಸ್ಥಿತಿಯಲ್ಲಿ ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಮನ್ವಯ ಸಭೆ ನಡೆಯಿತು.

ಸಭೆಯಲ್ಲಿ ಕಾರ್ಯಕ್ರಮದ ಸಂದರ್ಭದಲ್ಲಿ ಅಗತ್ಯವಿರುವ ಸ್ವಚ್ಛತಾ ವ್ಯವಸ್ಥೆ, ಸುಗಮ ಸಂಚಾರ ನಿರ್ವಹಣೆ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಆರೋಗ್ಯ ಸೇವೆ, ಅಗ್ನಿಶಾಮಕ ಸುರಕ್ಷತೆ ಸೇರಿದಂತೆ ವಿವಿಧ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೌಲಭ್ಯಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಮೇಳಕ್ಕೆ ಆಗಮಿಸುವ ಸಾರ್ವಜನಿಕರು, ರೈತರು, ಉದ್ಯಮಿಗಳು ಹಾಗೂ ಸಂದರ್ಶಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ಉಡುಪಿ ಅಪರ ಜಿಲ್ಲಾಧಿಕಾರಿ  ಅಬೀದ್ ಗದ್ಯಾಳ, ನಗರಸಭೆ ಪೌರಾಯುಕ್ತ  ಮಹಾಂತೇಶ್ ಹಂಗರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಜಿ. ಹುಬ್ಬಳ್ಳಿ, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕಿ  ಕ್ಷಮಾ ಪಾಟೀಲ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ  ವಿನಾಯಕ ಉ. ಕಲ್ಗುಟಕರ್, ಉಡುಪಿ ನಗರ ಠಾಣೆಯ ಉಪನಿರೀಕ್ಷಕ ಶ್ರೀ ಭರತೇಶ್ ಕಂಕಣವಾಡಿ ಹಾಗೂ ಸಂಚಾರ ಠಾಣೆಯ ಉಪನಿರೀಕ್ಷಕ ಶ್ರೀ ಮಹೇಶ್ ಟಿ. ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮಾಜಿ ಶಾಸಕ   ಕೆ. ರಘುಪತಿ ಭಟ್, ಕಾಂಗ್ರೆಸ್ ಮುಖಂಡ  ಪ್ರಸಾದ್ ರಾಜ್ ಕಾಂಚನ್, ಉಡುಪಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ   ರಮೇಶ್ ಕಾಂಚನ್ ಹಾಗೂ ಮಾಜಿ ನಗರಸಭಾ ಸದಸ್ಯ  ಗಿರೀಶ್ ಅಂಚನ್ ಉಪಸ್ಥಿತರಿದ್ದರು.

ನವೆಂಬರ್ 29ರಂದು ಬೆಳಿಗ್ಗೆ 7:45ಕ್ಕೆ ಉಡುಪಿಯ ರಥಬೀದಿಯಲ್ಲಿರುವ ಸೋದೆ ಶ್ರೀ ವಾದಿರಾಜ ಮಠದಲ್ಲಿ ಬಾಳೆ ಮುಹೂರ್ತ ನೆರವೇರಲಿದೆ. ಅದೇ ದಿನ ಬೆಳಿಗ್ಗೆ 9:30ಕ್ಕೆ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ‘ಕದಳೀ ವಿಶ್ವದರ್ಶನ’ ಬಾಳೆ ಮೇಳದ ಉದ್ಘಾಟನೆ ನಡೆಯಲಿದೆ. ಮೂರು ದಿನಗಳ ಕಾಲ ನಡೆಯುವ ಈ ಮೇಳವು ಪ್ರತಿದಿನ ಬೆಳಿಗ್ಗೆ 9:00ರಿಂದ ರಾತ್ರಿ 9:00ರವರೆಗೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರಲಿದ್ದು, ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version