ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸುತ್ತಮುತ್ತಲಿನ ಅಭಿವೃದ್ಧಿಗೆ ಆದ್ಯತೆ: ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಸೂಚನೆ

Spread the love

ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸುತ್ತಮುತ್ತಲಿನ ಅಭಿವೃದ್ಧಿಗೆ ಆದ್ಯತೆ: ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಸೂಚನೆ

ಮಂಗಳೂರು: ಮಂಗಳೂರಿನ ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಆದ್ಯತೆ ನೀಡುವಂತೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಕುರಿತು ಅವರು ಸ್ಥಳ ಪರಿಶೀಲನೆ ನಡೆಸಿದರು. ಸಾರ್ವಜನಿಕರ ಅನುಕೂಲತೆ ಹಾಗೂ ಪ್ರದೇಶದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕಾಮಗಾರಿಗಳನ್ನು ಗುರುತಿಸಿ, ಅವುಗಳನ್ನು ತುರ್ತಾಗಿ ಕೈಗೊಳ್ಳಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ, ಮುಡಾ ಆಯುಕ್ತ ಮೊಹಮ್ಮದ್ ನಜೀರ್ ಸೇರಿದಂತೆ ಮಹಾನಗರ ಪಾಲಿಕೆ ಹಾಗೂ ಮುಡಾದ ಅಧಿಕಾರಿಗಳು ಉಪಸ್ಥಿತರಿದ್ದರು.

ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ದಿಲ್ ರಾಜ್ ಅಲ್ವಾ, ರಾಜೇಂದ್ರ ಚಿಲಿಂಬಿ, ಉಷಾ ಪ್ರಭಾಕರ್, ಕಿರಣ್ ಕುಮಾರ್ ಮತ್ತು ಪ್ರೀತಾ ನಂದನ್ ಈ ಸಂದರ್ಭದಲ್ಲಿ ಹಾಜರಿದ್ದರು.


Spread the love
Subscribe
Notify of

0 Comments