ಪುತ್ತೂರು: ಓವರ್ ಟೆಕ್ ಬರದಲ್ಲಿ ಲಾರಿ-ಕಾರು ಅಪಘಾತ; ಪಲ್ಟಿಯಾದ ಲಾರಿ

Spread the love

ಪುತ್ತೂರು: ಓವರ್ ಟೆಕ್ ಬರದಲ್ಲಿ ಲಾರಿ-ಕಾರು ಅಪಘಾತ; ಪಲ್ಟಿಯಾದ ಲಾರಿ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾ‌ರ್ ಸಮೀಪ ಇಂದು ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. ಅತಿವೇಗ ಹಾಗೂ ಓವರ್‌ಟೇಕ್ ಮಾಡುವ ಭರದಲ್ಲಿ ಈ ದುರಂತ ನಡೆದಿದೆ ಎನ್ನಲಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಯು ಮುಂಭಾಗದಲ್ಲಿದ್ದ ಕಾರನ್ನು ಓವರ್‌ಟೇಕ್ ಮಾಡಲು ಯತ್ನಿಸಿದಾಗ ಈ ಭೀಕರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಲಾರಿಯು ಹೆದ್ದಾರಿಗೆ ಅಡ್ಡಲಾಗಿ ಮಗುಚಿಬಿದ್ದಿದೆ.

ಅಪಘಾತದಿಂದಾಗಿ ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯ ಸಾರ್ವಜನಿಕರು ಹಾಗೂ ಹಾದಿಹೋಕರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು ನೆರವಾಗಿದ್ದಾರೆ.

ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ತಬ್ಧಗೊಂಡು, ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ರೇನ್ ಬಳಸಿ ರಸ್ತೆಯಲ್ಲಿದ್ದ ಲಾರಿಯನ್ನು ತೆರವುಗೊಳಿಸಿ ವಾಹನ ಸಂಚಾರವನ್ನು ಸುಗಮಗೊಳಿಸಿದರು. ಪ್ರಕರಣ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Spread the love
Subscribe
Notify of

0 Comments