Home Mangalorean News Kannada News ಪುತ್ತೂರು: ಎಂಡಿಎಂಎ ಮಾದಕ ವಸ್ತು ಮಾರಾಟ ಜಾಲ ಪತ್ತೆ – ನಾಲ್ವರು ಆರೋಪಿಗಳ ಬಂಧನ, ಕಾರು...

ಪುತ್ತೂರು: ಎಂಡಿಎಂಎ ಮಾದಕ ವಸ್ತು ಮಾರಾಟ ಜಾಲ ಪತ್ತೆ – ನಾಲ್ವರು ಆರೋಪಿಗಳ ಬಂಧನ, ಕಾರು ಸಹಿತ ಸೊತ್ತು ವಶ

Spread the love

ಪುತ್ತೂರು: ಎಂಡಿಎಂಎ ಮಾದಕ ವಸ್ತು ಮಾರಾಟ ಜಾಲ ಪತ್ತೆ – ನಾಲ್ವರು ಆರೋಪಿಗಳ ಬಂಧನ, ಕಾರು ಸಹಿತ ಸೊತ್ತು ವಶ

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತು ಸೇವನೆ ಹಾಗೂ ಮಾರಾಟ ನಡೆಸುತ್ತಿದ್ದ ಜಾಲವೊಂದನ್ನು ಪತ್ತೆಹಚ್ಚಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಪುತ್ತೂರು ನಿವಾಸಿಗಳಾದ ಮೊಹಮ್ಮದ್ ಹರ್ಷದ್ (33), ಮಹಮ್ಮದ್ ಆರೀಶ್ (31), ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ (46) ಹಾಗೂ ಆರೋಪಿಗಳಿಗೆ ಎಂಡಿಎಂಎ ಪೂರೈಸುತ್ತಿದ್ದ ಬಂಟ್ವಾಳ ನಿವಾಸಿ ಮುಸ್ತಾಫ (46) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಅಂದಾಜು ರೂ.50,000 ಮೌಲ್ಯದ ಸುಮಾರು 6.39 ಗ್ರಾಂ ಎಂಡಿಎಂಎ, 0.87 ಗ್ರಾಂ ಗಾಂಜಾ, ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ಅಂದಾಜು ರೂ.6 ಲಕ್ಷ ಮೌಲ್ಯದ ಎರಡು ಕಾರುಗಳನ್ನು ಸೇರಿದಂತೆ ಇತರೆ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ ರೂ.6.50 ಲಕ್ಷವಾಗಿದೆ.

ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಿನಾಂಕ 24-01-2026ರಂದು ಅಪರಾಧ ಸಂಖ್ಯೆ 13/2026 ಕಲಂ 8(c), 21(b) ಎನ್‌ಡಿಪಿಎಸ್ ಕಾಯ್ದೆ ಹಾಗೂ 25(1B)(B) ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಗುಣಪಾಲ ಜೆ. ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಉಪನಿರೀಕ್ಷಕಿ ಸುಶ್ಮಾ ಭಂಡಾರಿ ಹಾಗೂ ಸಿಬ್ಬಂದಿಗಳಾದ ಮುರುಗೇಶ್ ಪರಮೇಶ್ವರ, ಸತೀಶ್, ಸುಬ್ರಹ್ಮಣ್ಯ, ಹರೀಶ್, ನಾಗೇಶ್, ಭವಿತ್ ರೈ, ವಿನೋದ್, ನಾಗರಾಜ್, ಕಾರ್ತಿಕ್ ಸೇರಿದಂತೆ ವಿಶೇಷ ತಂಡದ ಅದ್ರಾಮ್, ಪ್ರಶಾಂತ್ ಎಂ., ಪ್ರವೀಣ್ ರೈ, ಪ್ರಶಾಂತ್ ರೈ, ಹರ್ಷಿತ್, ಸಂಪತ್ ಹಾಗೂ  ತಂಡದವರು ಭಾಗವಹಿಸಿದ್ದರು.


Spread the love

Exit mobile version