ಪುತ್ತೂರು ರಸ್ತೆ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ
ಮಂಗಳೂರು: ರಸ್ತೆ ದುರಸ್ಥಿ ಸಂಬಂಧ ಪುತ್ತೂರು ನಗರದ ನೆಹರೂನಗರ – ಬನ್ನೂರು- ಹಾರಾಡಿ ರಸ್ತೆಯಲ್ಲಿ ಅಕ್ಟೋಬರ್ 19 ರಿಂದ ನವೆಂಬರ್ 4 ರವರೆಗೆ ಎಲ್ಲಾ ವಿಧದ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ, ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಮತ್ತು ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ಸಂಚರಿಸುವ ವಾಹನಗಳು ಬೋಳುವಾರು ಮೂಲಕ ಬದಲಿ ರಸ್ತೆಯಲ್ಲಿ ಸಂಚರಿಸಲು ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.
ಸುಳ್ಯ-ಆಲೆಟ್ಟಿ-ಬಡ್ಡಡ್ಕ-ಕೂರ್ನಡ್ಕ ಸೇತುವೆ ದುರಸ್ತಿ: ಸಂಚಾರ ಮಾರ್ಗ ಬದಲಾವಣೆ
ಸುಳ್ಯ ವಿಧಾನ ಸಭಾ ಕ್ಷೇತ್ರದ ಸುಳ್ಯ-ಆಲೆಟ್ಟಿ-ಬಡ್ಡಡ್ಕ-ಕೂರ್ನಡ್ಕ ಜಿಲ್ಲಾ ಮುಖ್ಯ ರಸ್ತೆಯ ಕಿ.ಮೀ.0.80 ರಲ್ಲಿನ ಪಯಸ್ವಿನಿ ನದಿಯ ಸೇತುವೆಯ ದುರಸ್ಥಿ ಕೆಲಸದ ಪ್ರಯುಕ್ತ ಅಕ್ಟೋಬರ್ 19 ರಿಂದ ನವೆಂಬರ್ 30 ರವರೆಗೆ ಆಲೆಟ್ಟಿ-ಬಡ್ಡಡ್ಕ-ಕೂರ್ನಡ್ಕ ಮತ್ತು ಆಲೆಟ್ಟಿ-ಕೊಲ್ಚಾರು-ಕಣಕ್ಕೂರು-ಬಂದ್ಯಡ್ಕ ಹಾಗೂ ಕೇರಳ ಭಾಗಕ್ಕೆ ಸಂಚರಿಸುವ ವಾಹನಗಳು ಜಿಲ್ಲಾ ಮುಖ್ಯ ರಸ್ತೆಯಾದ ಸುಳ್ಯ-ಕಾಂತಮಂಗಲ-ಅಜ್ಜಾವರ-ಮಂಡೆಕೋಲು-ಕನ್ಯಾನ ಮಾರ್ಗವಾಗಿ ಮತ್ತು ನಾರ್ಕೋಡು-ಅಜ್ಜಾವರ ಗ್ರಾಮೀಣ ರಸ್ತೆ ಮೂಲಕ ಸಂಚರಿಸುವಂತೆ ಹಾಗೂ ಆ ಭಾಗಗಳಿಂದ ಸುಳ್ಯಕ್ಕೆ ಬರುವ ವಾಹನಗಳು ಸಹ ಇದೇ ಮಾರ್ಗವಾಗಿ ಸಂಚರಿಸುವಂತೆ ಸಂಚಾರ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.
