Home Mangalorean News Kannada News ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕರ್ನಾಟಕದಿಂದ ಖರ್ಗೆ ಸೇರಿ ಮೂವರಿಗೆ ಟಿಕೆಟ್

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕರ್ನಾಟಕದಿಂದ ಖರ್ಗೆ ಸೇರಿ ಮೂವರಿಗೆ ಟಿಕೆಟ್

Spread the love

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕರ್ನಾಟಕದಿಂದ ಖರ್ಗೆ ಸೇರಿ ಮೂವರಿಗೆ ಟಿಕೆಟ್

ಬೆಂಗಳೂರು: ಒಟ್ಟು 10 ರಾಜ್ಯಗಳ 24 ಸ್ಥಾನಗಳಿಗೆ ಜೂನ್ 18 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಗುರುವಾರ 7 ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದೆ.

ಕರ್ನಾಟಕದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಮತ್ತು ಮನ್ಸೂರ್ ಅಲಿ ಖಾನ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರು ನಾಳೆ ವಿಧಾನಸೌಧದಲ್ಲಿ ಚುನಾಣಾಧಿಕಾರಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಅವರಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಾಥ್ ನೀಡಲಿದ್ದಾರೆ.

ರಾಜ್ಯದಿಂದ ನಾಲ್ಕು ರಾಜ್ಯಸಭೆ ಸ್ಥಾನಗಳು ತೆರವಾಗಲಿದ್ದು, ಆ ಪೈಕಿ ಕಾಂಗ್ರೆಸ್ ಸಂಖ್ಯಾಬಲದಂತೆ 3 ಸ್ಥಾನ ಗೆಲ್ಲಬಹುದಾಗಿದೆ. ಬಿಜೆಪಿಗೆ ಒಂದು ಸ್ಥಾನ ಸಿಗಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮರು ಆಯ್ಕೆಗಾಗಿ ನಾಳೆ ಮಧ್ಯಾಹ್ನ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ.

ಇನ್ನು ಕಾಂಗ್ರೆಸ್ ಉಳಿದಿರುವ ಎರಡು ರಾಜ್ಯಸಭೆ ಸ್ಥಾನಕ್ಕೆ ಪವನ್ ಖೇರಾ ಹಾಗೂ ಮನ್ಸೂರ್ ಅಲಿ ಖಾನ್ ಹೆಸರನ್ನು ಘೋಷಿಸಿದೆ. ಮಧ್ಯ ಪ್ರದೇಶದಿಂದ ಮೀನಾಕ್ಷಿ ನಟರಾಜನ್, ರಾಜಸ್ಥಾನದಿಂದ ನೀರಜ್ ದಂಗಿ, ತಮಿಳುನಾಡಿನಿಂದ ಪ್ರವೀಣ್ ಚಕ್ರವರ್ತಿ ಹಾಗೂ ಜಾರ್ಖಂಡ್ ನಿಂದ ಪ್ರಣವ್ ಜಾ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ಜೂನ್ 18ಕ್ಕೆ ರಾಜ್ಯಸಭೆ ಚುನಾವಣೆ ನಡೆಯಲಿದೆ. ಜೂನ್ 8ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.


Spread the love

Exit mobile version