Home Mangalorean News Kannada News ಶಿರ್ಲಾಲು ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಶಿರ್ಲಾಲು ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

Spread the love

ಶಿರ್ಲಾಲು ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಬೆಳ್ತಂಗಡಿ:  ತಾಲೂಕಿನ ಶಿರ್ಲಾಲು ಗ್ರಾಮದ ಮಣಿಲದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಅಪರೂಪದ ಕರಿ ಚಿರತೆಯೊಂದು ಸೆರೆಯಾಗಿದೆ. ಪದ್ಮನಾಭ ಅವರ ಮನೆಯ ಸಮೀಪ ಅರಣ್ಯ ಇಲಾಖೆ ಬೋನನ್ನು ಇರಿಸಿದ್ದು, ಅ. 10ರಂದು ಚಿರತೆ ಬೋನಿಗೆ ಬಿದ್ದಿದೆ. ಕರಿ ಚಿರತೆ ಸೆರೆಯಾಗಿರುವ ಸುದ್ದಿ ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ.

ಶಿರ್ಲಾಲು ಗ್ರಾಮದ ಮಣಿಲ ಪರಿಸರದಲ್ಲಿ ಚಿರತೆಯ ಚಲನವಲನದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ವೇಣೂರು ವಲಯದ ವತಿಯಿಂದ ಕೆಲವು ದಿನಗಳ ಹಿಂದೆ ಪದ್ಮನಾಭ ಅವರ ಮನೆಯ ಸಮೀಪ ಬೋನು ಇರಿಸಲಾಗಿತ್ತು. ಅ. 10ರಂದು ಈ ಬೋನಿಗೆ ಸುಮಾರು ಎರಡು ವರ್ಷ ಪ್ರಾಯದ ಗಂಡು ಚಿರತೆ ಬಿದ್ದಿರುವುದು ಗಮನಕ್ಕೆ ಬಂದಿದ್ದು, ತಕ್ಷಣವೇ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮುಂದಿನ ಕ್ರಮ ಕೈಗೊಂಡರು.

ಸಾಮಾನ್ಯವಾಗಿ ಚಿರತೆಗಳು ಹಳದಿ ಅಥವಾ ಕಂದು ಬಣ್ಣದ ಮೈಮೇಲೆ ಕಪ್ಪು ಚುಕ್ಕೆಗಳನ್ನು ಹೊಂದಿರುತ್ತವೆ. ಆದರೆ, ಕಪ್ಪು ಬಣ್ಣದ ಚಿರತೆಗಳು ಅಪರೂಪವಾಗಿ ಕಾಣಿಸಿಕೊಳ್ಳುತ್ತವೆ.

ಚಿರತೆಯು ಆರೋಗ್ಯವಾಗಿದ್ದು, ಅರಣ್ಯ ಇಲಾಖೆಯ ಪಶುವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಸುರಕ್ಷಿತವಾಗಿ ಸಂರಕ್ಷಿತಾರಣ್ಯಕ್ಕೆ ಬಿಡಲಾಗುವುದು ಎಂದು ವೇಣೂರು ವಲಯ ಅರಣ್ಯಾಧಿಕಾರಿ ಭರತ್ ಯು.ಜಿ. ತಿಳಿಸಿದ್ದಾರೆ.

ಚಿರತೆಯನ್ನು ಸೆರೆಹಿಡಿಯುವ ಕಾರ್ಯಾಚರಣೆಯಲ್ಲಿ ಅಳದಂಗಡಿ ಶಾಖೆಯ ಉಪವಲಯ ಅರಣ್ಯಾಧಿಕಾರಿ ಹರಿಪ್ರಸಾದ್, ಗಸ್ತು ವನಪಾಲಕ ಮಂಜುನಾಥ್ ಬಿ.ಎಸ್., ಅರಣ್ಯ ವೀಕ್ಷಕರಾದ ವೆಂಕಪ್ಪ ನಾಯ್ಕ ಮತ್ತು ಪೂವಪ್ಪ ನಾಯ್ಕ ಹಾಗೂ ಸ್ಥಳೀಯರು ಭಾಗವಹಿಸಿದ್ದರು.

ಕಳೆದ ಕೆಲವು ಸಮಯದ ಹಿಂದೆ ಶಿರ್ಲಾಲಿನಲ್ಲಿ ಹಳದಿ ಬಣ್ಣದ ಚಿರತೆ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಬಿದ್ದಿತ್ತು.

ತಾಲೂಕಿನಲ್ಲಿ ಚಿರತೆಗಳ ಓಡಾಟ ಹೊಸತಲ್ಲ. ಕಳೆದ ಕೆಲವು ತಿಂಗಳುಗಳಿಂದ ಇದು ವಿಪರೀತವಾಗಿದೆ. ಆದರೆ, ಕಪ್ಪು ಬಣ್ಣದ ಚಿರತೆ ಕಾಣಿಸಿಕೊಳ್ಳುವುದು ಅಪರೂಪ. ಸಾಮಾನ್ಯವಾಗಿ ಚಿರತೆಗಳ ಮೈಬಣ್ಣ ಹಳದಿ ಅಥವಾ ಕಂದು ಬಣ್ಣದಲ್ಲಿದ್ದು, ಮೈಮೇಲೆ ಕಪ್ಪು ಚುಕ್ಕೆಗಳಿರುತ್ತವೆ. ಆದರೆ, ಕರಿ ಚಿರತೆಯ ಮೈಮೇಲೆ ಕಪ್ಪು ಬಣ್ಣವೇ ಪ್ರಧಾನವಾಗಿರುತ್ತದೆ. ಬೆಳಕಿನ ಕೋನಕ್ಕೆ ಅನುಗುಣವಾಗಿ ಅದರ ಮೈಮೇಲಿನ ಚುಕ್ಕೆಗಳು ಮಸುಕಾಗಿ ಗೋಚರಿಸಬಹುದು. ಇಂತಹ ಚಿರತೆಗಳನ್ನು ಮೆಲಾನಿಸ್ಟಿಕ್ ಚಿರತೆ ಎಂದು ಕರೆಯಲಾಗುತ್ತದೆ. ದೇಹದಲ್ಲಿ ಮೆಲನಿನ್ ಎಂಬ ವರ್ಣದ್ರವ್ಯ ಹೆಚ್ಚಾಗಿ ಉತ್ಪತ್ತಿಯಾಗುವುದರಿಂದ ಇವು ಕಪ್ಪು ಬಣ್ಣದಲ್ಲಿ ಕಾಣಿಸಿಕೊಳ್ಳುತ್ತವೆ.ಕರ್ನಾಟಕದ ಪಶ್ಚಿಮ ಘಟ್ಟಗಳ ಅರಣ್ಯ ಪ್ರದೇಶಗಳು ಚಿರತೆ ಸೇರಿದಂತೆ ಹಲವು ವನ್ಯಜೀವಿಗಳ ಆವಾಸಸ್ಥಾನವಾಗಿವೆ.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version