Home Mangalorean News Kannada News ಹೊಸ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ಹಳೆಯ ತುಕ್ಕು ಹಿಡಿದ ಹಾಸಿಗೆಗಳ ಸ್ಥಳಾಂತರ: ರಾಜ್ಯ ಸರ್ಕಾರದ ವಿರುದ್ಧ ಶಾಸಕ...

ಹೊಸ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ಹಳೆಯ ತುಕ್ಕು ಹಿಡಿದ ಹಾಸಿಗೆಗಳ ಸ್ಥಳಾಂತರ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ

Spread the love

ಹೊಸ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ಹಳೆಯ ತುಕ್ಕು ಹಿಡಿದ ಹಾಸಿಗೆಗಳ ಸ್ಥಳಾಂತರ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ: ಅಗತ್ಯ ಮೂಲಸೌಕರ್ಯ, ವೈದ್ಯಕೀಯ ಉಪಕರಣಗಳು ಹಾಗೂ ವೈದ್ಯರು ಮತ್ತು ಸಿಬ್ಬಂದಿಗಳ ನೇಮಕಾತಿ ಇಲ್ಲದೆ ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ತಾಲೂಕು ಆಸ್ಪತ್ರೆಯನ್ನು ಸ್ಥಳಾಂತರಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಜಿಲ್ಲೆಯ ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡಿದಂತಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಆರೋಪಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 250 ಹಾಸಿಗೆಗಳ, ಆರು ಮಹಡಿಗಳ ನೂತನ ಜಿಲ್ಲಾಸ್ಪತ್ರೆ ಕಟ್ಟಡವನ್ನು ಮೂಲ ವಿಸ್ತೃತ ಯೋಜನಾ ವರದಿಯ ಪ್ರಕಾರ ಹಾಗೂ ರಾಜ್ಯದ ಇತರ ಜಿಲ್ಲಾ ಆಸ್ಪತ್ರೆಗಳಿಗೆ ಸಮಾನವಾಗಿ ಸಜ್ಜುಗೊಳಿಸದೆ ತರಾತುರಿಯಲ್ಲಿ ಸ್ಥಳಾಂತರಕ್ಕೆ ಮುಂದಾಗಿರುವುದು ಖಂಡನೀಯ ಎಂದರು.

ನೂತನ ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ವೈದ್ಯರು, ಶುಶ್ರೂಷಕರು, ತಾಂತ್ರಿಕ ಸಿಬ್ಬಂದಿ ಹಾಗೂ ಇತರ ಸಿಬ್ಬಂದಿಗಳ ಹುದ್ದೆಗಳನ್ನು ಮಂಜೂರು ಮಾಡಿಲ್ಲ. ಸ್ಕ್ಯಾನಿಂಗ್, ಎಕ್ಸ್ರೇ ಸೇರಿದಂತೆ ಅಗತ್ಯ ವೈದ್ಯಕೀಯ ಯಂತ್ರೋಪಕರಣಗಳು, ಪೀಠೋಪಕರಣಗಳು, ಕಂಪ್ಯೂಟರ್ಗಳು ಮತ್ತು ಪ್ರಿಂಟರ್ಗಳನ್ನೂ ಒದಗಿಸಿಲ್ಲ. ಆರು ಮಹಡಿಗಳ ಕಟ್ಟಡವನ್ನು ಸ್ವಚ್ಛಗೊಳಿಸಲು ಅಗತ್ಯವಿರುವ ಸ್ವಚ್ಛತಾ ಸಿಬ್ಬಂದಿ ಹಾಗೂ ಪರಿಕರಗಳ ವ್ಯವಸ್ಥೆಯೂ ಆಗಿಲ್ಲ ಎಂದು ದೂರಿದರು.

ನಡುಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 120 ಹಾಸಿಗೆಗಳ ತಾಲೂಕು ಆಸ್ಪತ್ರೆಯನ್ನು ಯಾವುದೇ ಹೆಚ್ಚುವರಿ ಸೌಲಭ್ಯಗಳಿಲ್ಲದೆ ಅಜ್ಜರಕಾಡಿನ ನೂತನ ಕಟ್ಟಡಕ್ಕೆ ಸ್ಥಳಾಂತರಿಸಲು ಸಿದ್ಧತೆ ನಡೆಸಲಾಗಿದೆ. ಪ್ರಸ್ತುತ ಆಸ್ಪತ್ರೆಯಲ್ಲಿರುವ ಸುಮಾರು 30 ವರ್ಷ ಹಳೆಯದಾದ ತುಕ್ಕು ಹಿಡಿದ 120 ಹಾಸಿಗೆಗಳನ್ನೇ ಹೊಸ ಕಟ್ಟಡಕ್ಕೆ ಕೊಂಡೊಯ್ಯಲು ಮುಂದಾಗಿರುವುದು ದುರದೃಷ್ಟಕರ. ಅಗತ್ಯ ವೈದ್ಯಕೀಯ ಸೌಲಭ್ಯಗಳಿಲ್ಲದೆ ಆಸ್ಪತ್ರೆಯನ್ನು ಸ್ಥಳಾಂತರಿಸಿದರೆ, ಅದು ಕೇವಲ ಕಟ್ಟಡ ಬದಲಾವಣೆಯಾಗಲಿದೆ ಹೊರತು ಜನರಿಗೆ ಜಿಲ್ಲಾಸ್ಪತ್ರೆಯ ಸೇವೆಗಳು ಲಭ್ಯವಾಗುವುದಿಲ್ಲ ಎಂದು ಹೇಳಿದರು.

ಕಳೆದ ಮೂರು ವರ್ಷಗಳಿಂದ ವಿಧಾನಸಭಾ ಅಧಿವೇಶನಗಳಲ್ಲಿ ಈ ವಿಷಯವನ್ನು ನಿರಂತರವಾಗಿ ಪ್ರಸ್ತಾಪಿಸಿದ್ದರೂ ಸರ್ಕಾರ ಯಾವುದೇ ಅನುದಾನ ಒದಗಿಸಿಲ್ಲ. ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಸ್ತುತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿಂದಿನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಪ್ರಸ್ತುತ ಆರೋಗ್ಯ ಸಚಿವ ಯು.ಟಿ. ಖಾದರ್, ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಹಾಲಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಪತ್ರ ಬರೆದು ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಇತರ ಜಿಲ್ಲಾಸ್ಪತ್ರೆಗಳಲ್ಲಿ ಲಭ್ಯವಿರುವ ವಿವಿಧ ವಿಶೇಷ ಚಿಕಿತ್ಸಾ ವಿಭಾಗಗಳನ್ನೂ ಉಡುಪಿಯ ನೂತನ ಜಿಲ್ಲಾಸ್ಪತ್ರೆಗೆ ಮಂಜೂರು ಮಾಡಿಲ್ಲ. ಅಗತ್ಯ ಸೌಲಭ್ಯಗಳಿಲ್ಲದ ಆಸ್ಪತ್ರೆಯನ್ನು ಉದ್ಘಾಟಿಸಿದರೆ, ದಶಕಗಳಿಂದ ಜಿಲ್ಲೆ ಜನರು ಹೊಂದಿರುವ ನಿರೀಕ್ಷೆಗೆ ಧಕ್ಕೆಯಾಗಲಿದೆ. ಬಹು ನಿರೀಕ್ಷೆಯಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಮರ್ಪಕ ಸೇವೆ ನೀಡುವುದು ವೈದ್ಯಾಧಿಕಾರಿಗಳಿಗೂ ಸವಾಲಾಗಲಿದೆ. ಇದರಿಂದ ರೋಗಿಗಳು ಸಂಕಷ್ಟಕ್ಕೆ ಸಿಲುಕುವುದರ ಜೊತೆಗೆ ಸ್ಥಳೀಯ ಜನಪ್ರತಿನಿಧಿಗಳಿಗೂ ಸಮಸ್ಯೆಯಾಗಲಿದೆ ಎಂದು ತಿಳಿಸಿದರು..

ಸ್ಥಳೀಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಸ್ಥಳಾಂತರದ ನಿರ್ಧಾರ ಕೈಗೊಳ್ಳುತ್ತಿರುವುದಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದರು. ಉಡುಪಿ ಜಿಲ್ಲೆಯನ್ನು ರಾಜ್ಯ ಸರ್ಕಾರ ನಿರಂತರವಾಗಿ ಕಡೆಗಣಿಸುತ್ತಿದ್ದು, ಜನರ ಜೀವ ರಕ್ಷಣೆಗೆ ಸಂಬಂಧಿಸಿದ ವೈದ್ಯಕೀಯ ಸೇವೆಗಳಲ್ಲಿಯೂ ನಿರ್ಲಕ್ಷ್ಯ ತೋರುತ್ತಿರುವುದು ಸರಿಯಲ್ಲ ಎಂದರು.

ಉಡುಪಿ ಜಿಲ್ಲೆಯು ರಚನೆಯಾಗಿ 28 ವರ್ಷಗಳು ಕಳೆದಿವೆ. ಜಿಲ್ಲೆಯ ಜನರ ಬಹುಕಾಲದ ಕನಸಾದ ಸುಸಜ್ಜಿತ ಜಿಲ್ಲಾಸ್ಪತ್ರೆಯನ್ನು ಇನ್ನು ವಿಳಂಬ ಮಾಡದೆ ಪೂರ್ಣ ಪ್ರಮಾಣದ ಸೌಲಭ್ಯಗಳೊಂದಿಗೆ ಆರಂಭಿಸಬೇಕು ಎಂದು ಆಗ್ರಹಿಸಿದರು.

ನೂತನ 250 ಹಾಸಿಗೆಗಳ ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ವೈದ್ಯರು, ನರ್ಸ್ಗಳು, ತಾಂತ್ರಿಕ ಮತ್ತು ಇತರ ಸಿಬ್ಬಂದಿಗಳನ್ನು ನೇಮಿಸಬೇಕು. ಅತ್ಯಾಧುನಿಕ ವೈದ್ಯಕೀಯ ಯಂತ್ರೋಪಕರಣಗಳು, ಹಾಸಿಗೆಗಳು, ಅಗತ್ಯ ಪರಿಕರಗಳು ಹಾಗೂ ಮೂಲಸೌಕರ್ಯಗಳನ್ನು ಒದಗಿಸಿ, ರಾಜ್ಯದ ಇತರ ಜಿಲ್ಲಾಸ್ಪತ್ರೆಗಳಿಗೆ ಸಮಾನವಾಗಿ ಸಜ್ಜುಗೊಳಿಸಿದ ಬಳಿಕವೇ ಆಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಸಮರ್ಪಿಸಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಒತ್ತಾಯಿಸಿದರು.
ಹಳೆಯ ವಸ್ತುಗಳನ್ನು ಹೊಸ ಆಸ್ಪತ್ರೆಗೆ ಸ್ಥಳಾಂತರಿಸುತ್ತಿರುವ ಕುರಿತು ರಾಜ್ಯದ ಆರೋಗ್ಯ ಸಚಿವರಾದ ಯು ಟಿ ಖಾದರ್ ಅವರಲ್ಲಿ ಮಾಹಿತಿ ಕೇಳಿದರೆ ತಮಗೆ ಯಾವುದೇ ಮಾಹಿತಿ ಇಲ್ಲ ಕೂಡಲೇ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಸಚಿವರು ವಾರದ ಒಳಗೆ ಉಡುಪಿಗೆ ಭೇಟಿ ನೀಡಿ ಹೊಸ ಆಸ್ಪತ್ರೆಯ ಕುರಿತು ಜಿಲ್ಲೆಯ ಎಲ್ಲಾ ಶಾಸಕರು, ಅಧಿಕಾರಿಗಳನ್ನು ಒಳಗೊಂಡು ಸಭೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಇಲ್ಲವಾದಲ್ಲಿ ಸಾರ್ವಜನಿಕರೊಂದಿಗೆ ಸೇರಿ ಆಹೋರಾತ್ರಿ ಸತ್ಯಾಗ್ರಹ ನಡೆಸುವುದಾಗಿ ಶಾಸಕ ಯಶಪಾಲ್ ಸುವರ್ಣ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ನಗರಸಭಾಧ್ಯಕ್ಷರಾದ ಪ್ರಭಾಕರ ಪೂಜಾರಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು, ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್ ಉಪಸ್ಥಿತರಿದ್ದರು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version