Home Mangalorean News Kannada News ಉಡುಪಿ ಜಿಲ್ಲೆಯಲ್ಲಿ ಮರಳುಗಾರಿಕೆ ಶೀಘ್ರ ಆರಂಭಿಸಿ : ಕೆ ವಿಕಾಸ್ ಹೆಗ್ಡೆ

ಉಡುಪಿ ಜಿಲ್ಲೆಯಲ್ಲಿ ಮರಳುಗಾರಿಕೆ ಶೀಘ್ರ ಆರಂಭಿಸಿ : ಕೆ ವಿಕಾಸ್ ಹೆಗ್ಡೆ

Spread the love

ಉಡುಪಿ ಜಿಲ್ಲೆಯಲ್ಲಿ ಮರಳುಗಾರಿಕೆ ಶೀಘ್ರ ಆರಂಭಿಸಿ : ಕೆ ವಿಕಾಸ್ ಹೆಗ್ಡೆ

  • ಮರಳು ಪೂರೈಕೆ ಇಲ್ಲದೆ ಸಾರ್ವಜನಿಕ ಹಾಗೂ ಸರ್ಕಾರಿ ನಿರ್ಮಾಣ ಕಾಮಗಾರಿಗಳಿಗೆ ತೊಂದರೆ

ಕುಂದಾಪುರ: ಮಳೆಗಾಲ ಮುಗಿದು ಹಲವು ತಿಂಗಳುಗಳು ಕಳೆದರೂ ಉಡುಪಿ ಜಿಲ್ಲೆಯಲ್ಲಿ ಸಿಹಿನೀರು ಮರಳುಗಾರಿಕೆ ಇನ್ನೂ ಆರಂಭವಾಗದಿರುವುದರಿಂದ ನಿರ್ಮಾಣ ಕಾಮಗಾರಿಗಳಿಗೆ ಅಗತ್ಯವಾದ ಮರಳು ಪೂರೈಕೆಯಲ್ಲಿ ತೀವ್ರ ಸಮಸ್ಯೆ ಎದುರಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ಆದಷ್ಟು ಬೇಗ ಸಿಹಿನೀರು ಮರಳುಗಾರಿಕೆ ಆರಂಭಿಸಬೇಕೆಂದು ಕುಂದಾಪುರ ತಾಲೂಕು ರೈತ ಸಂಘದ ಅಧ್ಯಕ್ಷ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲಾಡಳಿತ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯವರು ಅಧಿಕೃತವಾಗಿ ಮರಳುಗಾರಿಕೆಗೆ ಅನುಮತಿ ಪಡೆದಿರುವ ಪರವಾನಗಿದಾರರ ಮೂಲಕ ಆದಷ್ಟು ಬೇಗ ಮರಳು ಪೂರೈಕೆಗೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಈಗಾಗಲೇ ಜಿಲ್ಲೆಯಲ್ಲಿ ವಿವಿಧ ನಿರ್ಮಾಣ ಕಾಮಗಾರಿಗಳು ಆರಂಭಗೊಂಡಿವೆ. ಆದರೆ ಸಮರ್ಪಕವಾಗಿ ಮರಳು ಪೂರೈಕೆಯಾಗದ ಕಾರಣ ಸಾರ್ವಜನಿಕರು ಹಾಗೂ ಸರ್ಕಾರಿ ಕಾಮಗಾರಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಪಟ್ಟ ಇಲಾಖೆಗಳು ವಿವಿಧ ನೀತಿ-ನಿಯಮಗಳು ಮತ್ತು ಕಾನೂನುಗಳನ್ನು ಮುಂದಿಟ್ಟುಕೊಂಡು ಮರಳುಗಾರಿಕೆಗೆ ಅನಗತ್ಯ ವಿಳಂಬ ಮಾಡಬಾರದು. ಕಾನೂನುಬದ್ಧವಾಗಿ ಮರಳುಗಾರಿಕೆಗೆ ಪರವಾನಗಿ ಪಡೆದವರಿಗೆ ಮರಳು ಪೂರೈಕೆ ಮಾಡಲು ಆದಷ್ಟು ಬೇಗ ಅನುಮತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಜಿಲ್ಲೆಯಲ್ಲಿ ಮರಳು ಪೂರೈಕೆಯ ವಿಳಂಬದಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲೆಯ ಸಂಸದರು ಹಾಗೂ ಶಾಸಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕೆ. ವಿಕಾಸ್ ಹೆಗ್ಡೆ ಒತ್ತಾಯಿಸಿದ್ದಾರೆ.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version