Home Mangalorean News Kannada News ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಲ್ಲಿಗುಡ್ಡೆ ಸಮೀಪ ಕಾಮಗಾರಿ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆಗೋಡೆ ಹಾಗೂ...

ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಲ್ಲಿಗುಡ್ಡೆ ಸಮೀಪ ಕಾಮಗಾರಿ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆಗೋಡೆ ಹಾಗೂ ಗುಡ್ಡ ಕುಸಿತ

Spread the love

ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಲ್ಲಿಗುಡ್ಡೆ ಸಮೀಪ ಕಾಮಗಾರಿ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆಗೋಡೆ ಹಾಗೂ ಗುಡ್ಡ ಕುಸಿತ

ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಲ್ಲಿಗುಡ್ಡೆ ಸಮೀಪ ಕಾಮಗಾರಿ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆಗೋಡೆ ಹಾಗೂ ಗುಡ್ಡ ಕುಸಿದ ಘಟನೆ ಮಂಗಳವಾರ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಿರಂತರ ಮಳೆಯ ಪರಿಣಾಮ ಗುಡ್ಡದ ಮಣ್ಣು ಜರಿದು ರಸ್ತೆ ಬದಿಯಲ್ಲಿ ನಿರ್ಮಿಸಿದ್ದ ತಡೆಗೋಡೆಯ ಮೇಲೆ ಭಾರಿ ಒತ್ತಡ ಉಂಟಾಗಿದ್ದು, ತಡೆಗೋಡೆ ಸಂಪೂರ್ಣವಾಗಿ ಕುಸಿದಿದೆ. ಪರಿಣಾಮ ಕಾಮಗಾರಿ ಪ್ರದೇಶದಲ್ಲಿ ಮಣ್ಣು ದೊಡ್ಡ ಪ್ರಮಾಣದಲ್ಲಿ ಜಾರಿದೆ.

ಘಟನೆಯ ಬಳಿಕ ಕಾಮಗಾರಿ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವುದಾಗಿ ತಿಳಿದುಬಂದಿದೆ. ಕುಸಿತದಿಂದ ಸಾರ್ವಜನಿಕರಿಗೆ ಯಾವುದೇ ಹಾನಿಯಾಗಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಹಾನಿಯ ಪ್ರಮಾಣ ಹಾಗೂ ಕುಸಿತಕ್ಕೆ ಕಾರಣವಾದ ಅಂಶಗಳ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.


Spread the love

Exit mobile version