ಮಂಗಳೂರಿನ ನಾಗರಿಕ ಸೌಲಭ್ಯಕ್ಕೆ ರೋಹನ್ ಕಾರ್ಪೊರೇಶನ್ ಕೊಡುಗೆ: ನೂತನ ಬಸ್ ತಂಗುದಾಣ ಉದ್ಘಾಟನೆ

Spread the love

ಮಂಗಳೂರಿನ ನಾಗರಿಕ ಸೌಲಭ್ಯಕ್ಕೆ ರೋಹನ್ ಕಾರ್ಪೊರೇಶನ್ ಕೊಡುಗೆ: ನೂತನ ಬಸ್ ತಂಗುದಾಣ ಉದ್ಘಾಟನೆ

ಮಂಗಳೂರು: ಮಂಗಳೂರಿನ ಕಪಿತಾನಿಯೊದಲ್ಲಿ ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಿರ್ಮಿಸಲಾದ ನೂತನ ‘ರೋಹನ್ ಸ್ಕ್ವೇರ್’ ಬಸ್ ತಂಗುದಾಣ ಉದ್ಘಾಟನೆಗೊಂಡಿತು.

ನಗರದ ನಾಗರಿಕ ಮೂಲಸೌಕರ್ಯವನ್ನು ಬಲಪಡಿಸುವ ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ಉದ್ದೇಶದಿಂದ ಬಸ್ ತಂಗುದಾಣವನ್ನು ನಿರ್ಮಿಸಲಾಗಿದೆ.

ಕರ್ನಾಟಕ ವಿಧಾನಸಭೆಯ ಸದಸ್ಯ ಡಿ. ವೇದವ್ಯಾಸ ಕಾಮತ್ ಅವರು ನೂತನ ಬಸ್ ತಂಗುದಾಣವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೆರೊ, ನಿರ್ದೇಶಕ ಡಿಯೋನ್ ಮೊಂತೆರೊ, ಕಾರ್ಪೊರೇಟರ್ ಸಂದೀಪ್ ಗರೋಡಿ, ರೋಹನ್ ಕಾರ್ಪೊರೇಶನ್‌ನ ಜನರಲ್ ಮ್ಯಾನೇಜರ್ ಸುಮನಾ, ಜೇಮ್ಸ್ ಸೇರಿದಂತೆ ಗಣ್ಯರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿ. ವೇದವ್ಯಾಸ ಕಾಮತ್, ಜನರ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕೈಗೊಳ್ಳುವ ಕೆಲಸವೇ ನಿಜವಾದ ಸೇವೆ ಎಂದರು.

ಸಾರ್ವಜನಿಕರ ದೈನಂದಿನ ಪ್ರಯಾಣಕ್ಕೆ ಅನುಕೂಲವಾಗುವಂತೆ ರೋಹನ್ ಕಾರ್ಪೊರೇಶನ್ ಕೈಗೊಂಡಿರುವ ಈ ಕಾರ್ಯ ಶ್ಲಾಘನೀಯ. ಮಂಗಳೂರಿನ ಜನರಿಗೆ ಉಪಯುಕ್ತವಾಗುವ ಇಂತಹ ಕಾರ್ಯಗಳು ಇನ್ನಷ್ಟು ನಡೆಯಬೇಕು ಎಂದು ಅವರು ಆಶಿಸಿದರು.

ಕಾರ್ಪೊರೇಟರ್ ಸಂದೀಪ್ ಗರೋಡಿ ಮಾತನಾಡಿ, ಮಂಗಳೂರಿನ ಬೆಳವಣಿಗೆಯಲ್ಲಿ ರೋಹನ್ ಕಾರ್ಪೊರೇಶನ್‌ನ ಕೊಡುಗೆ ಗಮನಾರ್ಹವಾಗಿದೆ ಎಂದರು. ಸಂಸ್ಥೆಯ ಯೋಜನೆಗಳ ಜೊತೆಗೆ ನಗರದ ಜನಜೀವನಕ್ಕೆ ಉಪಯೋಗವಾಗುವ ಕಾರ್ಯಗಳಿಗೆ ಆದ್ಯತೆ ನೀಡುತ್ತಿರುವುದು ಅಭಿನಂದನಾರ್ಹ. ಮುಂದಿನ ದಿನಗಳಲ್ಲಿಯೂ ಇಂತಹ ಜನಪರ ಕಾರ್ಯಗಳು ಮುಂದುವರಿಯಬೇಕು ಎಂದು ಹೇಳಿದರು.

ರೋಹನ್ ಕಾರ್ಪೊರೇಶನ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೆರೊ ಮಾತನಾಡಿ, ಮಂಗಳೂರಿನೊಂದಿಗೆ ನಿಕಟವಾಗಿ ಬೆಸೆದುಕೊಂಡಿರುವ ಸಂಸ್ಥೆಯಾಗಿ ತಮ್ಮ ಜವಾಬ್ದಾರಿ ಕೇವಲ ಯೋಜನೆಗಳಿಗೆ ಸೀಮಿತವಾಗಿಲ್ಲ ಎಂದರು.

ಸಾರ್ವಜನಿಕರ ದೈನಂದಿನ ಬದುಕಿಗೆ ಅನುಕೂಲವಾಗುವಂತಹ ಕಾರ್ಯಗಳ ಮೂಲಕ ನಗರಕ್ಕೆ ಕೊಡುಗೆ ನೀಡುವುದು ಸಂಸ್ಥೆಯ ಬದ್ಧತೆಯ ಭಾಗವಾಗಿದೆ. ನೂತನ ಬಸ್ ತಂಗುದಾಣವು ಈ ನಿಟ್ಟಿನಲ್ಲಿ ಸಂಸ್ಥೆಯ ಒಂದು ಅರ್ಥಪೂರ್ಣ ಹೆಜ್ಜೆಯಾಗಿದೆ ಎಂದು ಅವರು ಹೇಳಿದರು.

ಸೌಜನ್ಯ ಹೆಗ್ಡೆ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ಮಂಗಳೂರಿನ ಅಭಿವೃದ್ಧಿಯಲ್ಲಿ ಹಲವು ವರ್ಷಗಳಿಂದ ಭಾಗಿಯಾಗಿರುವ ರೋಹನ್ ಕಾರ್ಪೊರೇಶನ್, ನಗರದ ಅಭಿವೃದ್ಧಿಯೊಂದಿಗೆ ಸಾರ್ವಜನಿಕರ ಬದುಕಿಗೆ ಅನುಕೂಲವಾಗುವ ವಿವಿಧ ಕಾರ್ಯಗಳಲ್ಲೂ ತನ್ನ ಪಾಲಿನ ಕೊಡುಗೆ ನೀಡುತ್ತಾ ಬಂದಿದೆ. ನಗರ ಮತ್ತು ಸಮುದಾಯದ ಹಿತಕ್ಕಾಗಿ ಇಂತಹ ಕಾರ್ಯಗಳನ್ನು ಮುಂದುವರಿಸುವ ಮೂಲಕ ಸಂಸ್ಥೆ ತನ್ನ ಸಾಮಾಜಿಕ ಬದ್ಧತೆಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ.


Spread the love
Subscribe
Notify of

0 Comments