ಪರ್ಯಾಯಕ್ಕೆ 6 ಕೋಟಿ ರೂ.: ಸಚಿವೆ ಹೆಬ್ಬಾಳ್ಕರ್ ಕಾಳಜಿ ಶ್ಲಾಘನೀಯ : ದೀಪಕ್ ಕೊಟ್ಯಾನ್
ಉಡುಪಿ: ಶಿರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥರ ಪ್ರಥಮ ಪರ್ಯಾಯದ ಹಿನ್ನೆಲೆಯಲ್ಲಿ ನಗರದಲ್ಲಿ ರೂ. 6 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಯ ನಿಟ್ಟಿನಲ್ಲಿ ವಿಶೇಷ ಆಸಕ್ತಿ ವಹಿಸಿ ಉಡುಪಿ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾಳಜಿ ಶ್ಲಾಘನೀಯ ಎಂದು ಕಾಂಗ್ರೆಸ್ ಮುಖಂಡ ದೀಪಕ್ ಕೋಟ್ಯಾನ್ ಹೇಳಿದ್ದಾರೆ.
ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವರು, ಪರ್ಯಾಯ ಸುಗಮವಾಗಿ ನಡೆಯಲು ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆ ಮಾಡಬೇಕು. ಸಮಯಾವಕಾಶ ಕಡಿಮೆ ಇರುವುದರಿಂದ ಸಮರೋಪಾದಿಯಲ್ಲಿ ಹಗಲು- ರಾತ್ರಿ ಕೆಲಸ ಮಾಡಬೇಕು. ಜಿಲ್ಲೆಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಕೊರತೆಯಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಪರ್ಯಾಯ ಮಹೋತ್ಸವದ ಯಶಸ್ಸಿಗೆ 6 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲು ಸೂಚಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾಳಜಿಗೆ ಧನ್ಯವಾದಗಳು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













