Home Mangalorean News Kannada News ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್

Spread the love

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್

ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಶತಮಾನೋತ್ಸವದ ಪಯಣದಲ್ಲಿಯೂ ಅನೇಕ ಟೀಕೆ, ಪ್ರಶ್ನೆಗಳು ಹಾಗೂ ಎರಡು ಬಾರಿ ನಿಷೇಧದಂತಹ ಸವಾಲುಗಳನ್ನು ಎದುರಿಸಿದ್ದರೂ, ತನ್ನ ಕಾರ್ಯಸೂಚಿಗಳನ್ನು ಮುಂದುವರಿಸಿಕೊಂಡು ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ ಎಂದು ಹಿಂದೂ ಸಂಘಟನೆಯ ನಾಯಕ ಸತ್ಯಜಿತ್ ಸುರತ್ಕಲ್ ಹೇಳಿದರು .

ಅವರು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ , ಸಂಘದ ಬಗ್ಗೆ ಯಾರೇ ಪ್ರಶ್ನೆ ಕೇಳಿದರೂ ಅದು ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗವಾಗಿದ್ದು, ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಹಿಂದೆ ಸಂಘದ ವಿರುದ್ಧ ಟೀಕೆಗಳು ಅಥವಾ ಪ್ರಶ್ನೆಗಳು ಉದ್ಭವಿಸಿದಾಗ ಸಮಾಜವೇ ಅದಕ್ಕೆ ಉತ್ತರ ನೀಡುತ್ತಿತ್ತು. ಸಂಘವನ್ನು ಸಮಾಜ ತನ್ನದೇ ಸಂಘಟನೆ ಎಂಬ ರೀತಿಯಲ್ಲಿ ಸ್ವೀಕರಿಸಿತ್ತು ಎಂದು ಅವರು ಹೇಳಿದರು.

ಇತ್ತೀಚೆಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಂಘದ ನೋಂದಣಿ ಹಾಗೂ ಹಿಂದುತ್ವದ ವಿಚಾರವಾಗಿ ಪ್ರಶ್ನೆಗಳನ್ನು ಎತ್ತಿದ ಸಂದರ್ಭದಲ್ಲಿ, ದಕ್ಷಿಣ ಕನ್ನಡದಂತಹ ಪ್ರದೇಶಗಳಲ್ಲಿ ಸಂಘದ ಕಾರ್ಯಚಟುವಟಿಕೆಗಳಿಂದ ಲಾಭ ಪಡೆದ ರಾಜಕೀಯ ನಾಯಕರು ನಿರೀಕ್ಷಿತ ರೀತಿಯಲ್ಲಿ ಪ್ರತಿಕ್ರಿಯೆ ನೀಡಿಲ್ಲ ಎಂಬ ಇಂಗಿತ ವ್ಯಕ್ತಪಡಿಸಿದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಘದ ಕಾರ್ಯಚಟುವಟಿಕೆಗಳ ಪ್ರಯೋಗಶಾಲೆ ಎಂದು ಕರೆಯಲಾಗುತ್ತದೆ. ಕಳೆದ ಹಲವು ದಶಕಗಳಿಂದ ಸಂಘದ ಕಾರ್ಯಕರ್ತರ ಪರಿಶ್ರಮ ಮತ್ತು ಹಿಂದುತ್ವದ ವಿಚಾರಧಾರೆಯ ಪರಿಣಾಮವಾಗಿ ಈ ಭಾಗದಲ್ಲಿ ರಾಜಕೀಯ ಯಶಸ್ಸು ಸಾಧ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಹಿಂದೆ ಸಂಘದ ಪರವಾಗಿ ಸಮಾಜದ ವಿವಿಧ ವಲಯಗಳು ಸ್ಪಷ್ಟವಾಗಿ ಧ್ವನಿಯಾಗುತ್ತಿದ್ದವು. ಆದರೆ ಈಗ ಆ ಮನೋಭಾವದಲ್ಲಿ ಬದಲಾವಣೆ ಕಂಡುಬರುತ್ತಿದೆ. ಸಂಘವನ್ನು ‘ಓನ್ ಅಪ್’ ಮಾಡಿಕೊಳ್ಳುವವರ ಸಂಖ್ಯೆ ಕಡಿಮೆಯಾಗಿದೆಯೇ ಅಥವಾ ಸಮಾಜದ ಕೆಲವು ವರ್ಗಗಳಲ್ಲಿ ಅಸಮಾಧಾನವಿದೆಯೇ ಎಂಬ ಪ್ರಶ್ನೆಗಳು ಉದ್ಭವಿಸುತ್ತಿವೆ ಎಂದು ಹೇಳಿದರು.

ಪ್ರಿಯಾಂಕ್ ಖರ್ಗೆ ಅವರ ಪ್ರಶ್ನೆಗಳಿಗೆ ಸಂಘವು ಕಾನೂನುಬದ್ಧವಾಗಿ ಉತ್ತರ ನೀಡುವ ಸಾಮರ್ಥ್ಯ ಹೊಂದಿದೆ. ಆದರೆ ಸಮಾಜದಲ್ಲಿ ಸಂಘದ ಬಗ್ಗೆ ರೂಪುಗೊಳ್ಳುತ್ತಿರುವ ಹೊಸ ಮನಸ್ಥಿತಿಯ ಬಗ್ಗೆ ಸಂಘದ ಹಿರಿಯರು ಆತ್ಮಾವಲೋಕನ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಎಂಬ ಸಂಘದ ಮೂಲ ಸಿದ್ಧಾಂತ ಇಂದಿಗೂ ಪ್ರಸ್ತುತವಾಗಿದೆ. ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಸಮರ್ಪಿತ ವ್ಯಕ್ತಿಗಳ ನಿರ್ಮಾಣ ಅನಿವಾರ್ಯವಾಗಿದ್ದು, ಈ ಕಾರ್ಯದಲ್ಲಿ ಯಾವುದೇ ನ್ಯೂನತೆ ಬರಬಾರದು. ಸಮಾಜದ ವಿಶ್ವಾಸವನ್ನು ಮತ್ತಷ್ಟು ಬಲಪಡಿಸುವ ದಿಸೆಯಲ್ಲಿ ಸಂಘ ಮುಂದಿನ ದಿನಗಳಲ್ಲಿ ಗಮನಹರಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version