ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಶ ಪ್ರಕಟ: ಉಡುಪಿಗೆ ಪ್ರಥಮ, ಯಾದಗಿರಿಗೆ ಕೊನೆಯ ಸ್ಥಾನ

Spread the love

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಶ ಪ್ರಕಟ: ಉಡುಪಿಗೆ ಪ್ರಥಮ, ಯಾದಗಿರಿಗೆ ಕೊನೆಯ ಸ್ಥಾನ

ಬೆಂಗಳೂರು: ಪ್ರಸಕ್ತ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ- 1 ರ ಫಲಿತಾಂಶ   ಏಪ್ರಿಲ್ 9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಆನ್ಲೈನ್ನಲ್ಲಿ ಪ್ರಕಟಗೊಂಡಿದ್ದು, ಬಳಿಕ ಇದೀಗ ಶಿಕ್ಷಣ ಸಚಿವ ಮಧುಬಂಗಾರಪ್ಪ   ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಿದ್ದಾರೆ.

2025-26ನೇ ಸಾಲಿನ ಸೆಕೆಂಡ್ ಪಿಯುಸಿ ಪರೀಕ್ಷೆಯಲ್ಲಿ ಶೇ.86.48ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ. ಇನ್ನು ಈ ಬಾರಿಯ ಫಲಿತಾಂಶದಲ್ಲಿ ಉಡುಪಿ ಪ್ರಥಮ ಸ್ಥಾನದಲ್ಲಿದ್ದರೆ, ಯಾದಗಿರಿಗೆ ಮತ್ತೆ ಕೊನೆ ಸ್ಥಾನ ಪಡೆದಿದೆ

ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮತ್ತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ.88.07ರಷ್ಟು ವಿದ್ಯಾರ್ಥಿನಿಯರು ಪಾಸಾಗಿದ್ದರೆ, ಶೇಕಡಾ 83.65 ವಿದ್ಯಾರ್ಥಿಗಳು ಪಾಸಾಗಿದ್ದಾರೆ.ಇನ್ನು ಕಲಾ ವಿಭಾಗದಲ್ಲಿ ಶೇಕಡಾ 72.86ರಷ್ಟು ಫಲಿತಾಂಶ ಬಂದಿದ್ದರೆ, ವಾಣಿಜ್ಯ ವಿಭಾಗದಲ್ಲಿ ಶೇಕಡಾ 88.04ರಷ್ಟು ಫಲಿತಾಂಶ ಹಾಗೂ ವಿಜ್ಞಾನ ವಿಭಾಗದಲ್ಲಿ ಶೇಕಡಾ 91.69ರಷ್ಟು ಫಲಿತಾಂಶ ಬಂದಿದೆ ಎಂದು ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು.

 


Spread the love
Subscribe
Notify of

0 Comments
Inline Feedbacks
View all comments