ಬ್ರಹ್ಮಾವರ ತಾಲೂಕಿನ ಹಿರಿಯ ಪತ್ರಕರ್ತ ಶೇಷಗಿರಿ ಭಟ್ ಆತ್ಮಹತ್ಯೆ

Spread the love

ಬ್ರಹ್ಮಾವರ ತಾಲೂಕಿನ ಹಿರಿಯ ಪತ್ರಕರ್ತ ಶೇಷಗಿರಿ ಭಟ್ ಆತ್ಮಹತ್ಯೆ

ಬ್ರಹ್ಮಾವರ: ಬ್ರಹ್ಮಾವರ ತಾಲೂಕಿನ ಹಿರಿಯ ಪತ್ರಕರ್ತ ಹಾಗೂ ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಬ್ರಹ್ಮಾವರ ಕ್ರಾಸ್ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲರಾಗಿದ್ದ ಶೇಷಗಿರಿ ಭಟ್ ಅವರು ಆರೂರು ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಮ್ಯ ಮನೋಭಾವದ ವ್ಯಕ್ತಿಯಾಗಿದ್ದ ಅವರು ಕಳೆದ ಹಲವಾರು ವರ್ಷಗಳಿಂದ ಬ್ರಹ್ಮಾವರ ತಾಲೂಕು ಪ್ರಜಾವಾಣಿ ಪತ್ರಿಕೆಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು.

ಕಳೆದ ಕೆಲವು ದಿನಗಳಿಂದ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗುತ್ತಿದ್ದರೂ, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಬ್ರಹ್ಮಾವರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಮೃತರು ಹೆಂಡತಿ ಓರ್ವ ಪುತ್ರ ಹಾಗೂ ತಂದೆ,ತಾಯಿ ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments