Home Mangalorean News Kannada News ಶಂಕರನಾರಾಯಣ| ಹೆಲ್ಮೆಟ್ ಧರಿಸಿ ದೇವಸ್ಥಾನದ ಕಾಣಿಕೆ ಹುಂಡಿ ಕಳವು ಪ್ರಕರಣ; ಇಬ್ಬರ ಬಂಧನ

ಶಂಕರನಾರಾಯಣ| ಹೆಲ್ಮೆಟ್ ಧರಿಸಿ ದೇವಸ್ಥಾನದ ಕಾಣಿಕೆ ಹುಂಡಿ ಕಳವು ಪ್ರಕರಣ; ಇಬ್ಬರ ಬಂಧನ

Spread the love

ಶಂಕರನಾರಾಯಣ| ಹೆಲ್ಮೆಟ್ ಧರಿಸಿ ದೇವಸ್ಥಾನದ ಕಾಣಿಕೆ ಹುಂಡಿ ಕಳವು ಪ್ರಕರಣ; ಇಬ್ಬರ ಬಂಧನ

ಉಡುಪಿ: ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳವು ಪ್ರಕರಣವನ್ನು ಶಂಕರನಾರಾಯಣ ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ದಿನಾಂಕ 20-04-2026 ರಂದು ಬೆಳಿಗ್ಗೆ 7:56ರ ಸುಮಾರಿಗೆ ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ದೇವಸ್ಥಾನದ ಹೊರ ಪೌಳಿಗೆ ಬಂದು ಕಾಣಿಕೆ ಹುಂಡಿಯನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದ. ಈ ಕುರಿತು ದೊರೆತ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಹೆಚ್.ಡಿ. ಕುಲಕರ್ಣಿ ಹಾಗೂ ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಎ. ಕಾಯ್ಕಣಿ ಅವರ ಮಾರ್ಗದರ್ಶನದಲ್ಲಿ ಶಂಕರನಾರಾಯಣ ಠಾಣೆಯ ಪಿ.ಎಸ್.ಐ.(ಕಾ.ಸೂ) ಐ.ಆರ್. ಗಡ್ಡೇಕರ್, ಪಿ.ಎಸ್.ಐ.(ತನಿಖೆ) ಅಕ್ಷಯ ಕುಮಾರಿ ಎಸ್.ಎನ್. ಹಾಗೂ ಸಿಬ್ಬಂದಿಗಳಾದ ಸಚಿನ್ ಶೆಟ್ಟಿ, ಜಯರಾಮ ನಾಯ್ಕ್, ಚೇತನ್ ಕುಮಾರ್, ನವೀನ್ ನಾಯ್ಕ್, ಕುಂದಾಪುರ ಗ್ರಾಮಾಂತರ ಠಾಣೆಯ ಮೌನೇಶ್ ನಾಯ್ಕ್ ಮತ್ತು ಜಿಲ್ಲಾ ತಾಂತ್ರಿಕ ವಿಭಾಗದ ದಿನೇಶ್ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಸಂದೀಪ ಆಚಾರಿ (28) ಹಾಗೂ ಮುತ್ತಪ್ಪ ಶರಣಪ್ಪ ವಾಲಿಕರ್ (40) ಅವರನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್ನಲ್ಲಿ ಬಂಧಿಸಿದೆ.

ಬಂಧಿತರಿಂದ ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್, ಮೂರು ಮೊಬೈಲ್ ಫೋನ್ಗಳು ಹಾಗೂ ಕಳವುಗೊಳಗಾದ ಉಮಾಮಹೇಶ್ವರ ದೇವಸ್ಥಾನದ ಕಾಣಿಕೆ ಹುಂಡಿಯನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಅಂದಾಜು ಮೌಲ್ಯ 1.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.


Spread the love

Exit mobile version