ಶಿರೂರು ಪರ್ಯಾಯ ಮಹೋತ್ಸವ: ಮದ್ಯ ಮಾರಾಟ ನಿಷೇಧ
ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಶಿರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯೋತ್ಸವದ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಠಿಯಿಂದ, ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶೀಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ರ ನಿಯಮ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹಾಗೂ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಾದ ಉದ್ಯಾವರ, ಕೊರಂಗ್ರಪಾಡಿ, ಅಲೆವೂರು, ಹಿರೇಬೆಟ್ಟು, ಅಂಬಲಪಾಡಿ, ಕುತ್ಪಾಡಿ, ಕಡೆಕಾರು, ಕಿದಿಯೂರು, ಮೂಡುತೋನ್ಸೆ ಹಾಗೂ ಪಡುತೋನ್ಸೆ ಗ್ರಾಮ ವ್ಯಾಪ್ತಿಯಲ್ಲಿ (10-15 ಕಿ.ಮೀ) ಜನವರಿ 17 ರಂದು ಬೆಳಗ್ಗೆ 10 ಗಂಟೆಯಿAದ ಜ. 18 ರ ಸಂಜೆ 6 ಗಂಟೆಯವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ಶಾಪ್ಗಳ ಮದ್ಯ ಮಾರಾಟವನ್ನು ನಿಷೇಧಿಸಿ, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮೇಲ್ಕಂಡ ಪ್ರದೇಶಗಳ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.
