ಶಿವಮೊಗ್ಗ : ಗನ್‌ನಿಂದ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ ಶಂಕೆ

Spread the love

ಶಿವಮೊಗ್ಗ : ಗನ್‌ನಿಂದ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ ಶಂಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ವೃದ್ಧರೊಬ್ಬರು ಗನ್‌ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿರುವ ಘಟನೆ ನಡೆದಿದ್ದು, ಆತ್ಮಹತ್ಯೆ ಶಂಕೆಯ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೃತರನ್ನು ತಟ್ಟೆಕೊಡ್ಲು ನಿವಾಸಿ ರಾಮಚಂದ್ರ ರಾವ್ (85) ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯರಾತ್ರಿ ಸುಮಾರು 1.30 ಗಂಟೆಯ ವೇಳೆಗೆ ತಮ್ಮ ಬಳಿಯಿದ್ದ ಸಿಂಗಲ್ ಬ್ಯಾರಲ್ ಗನ್‌ನಿಂದ ಕುತ್ತಿಗೆ ಸಮೀಪ ಗುಂಡು ಹಾರಿಸಿಕೊಂಡ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಗುಂಡೇಟಿನ ತೀವ್ರತೆಗೆ ಮೃತರ ತಲೆ ಭಾಗವು ಸಂಪೂರ್ಣವಾಗಿ ಛಿದ್ರಗೊಂಡಿರುವುದಾಗಿ ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಮೂರು ದಿನಗಳ ಹಿಂದೆ ರಾಮಚಂದ್ರ ರಾವ್ ಅವರು ಬಿದ್ದು ತಲೆಗೆ ಗಾಯ ಮಾಡಿಕೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಗಾಯದ ನೋವು ಕಡಿಮೆಯಾಗದ ಹಿನ್ನೆಲೆಯಲ್ಲಿ ತೀವ್ರ ವೇದನೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಘಟನೆಯಲ್ಲಿ ಬಳಸಲಾದ ಗನ್‌ಗೆ ಪರವಾನಗಿ ಇತ್ತೇ ಎಂಬ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ, ವೃದ್ಧರು ಯಾವ ರೀತಿಯಲ್ಲಿ ಗನ್‌ನ ಟ್ರಿಗರ್ ಒತ್ತಿ ಗುಂಡು ಹಾರಿಸಿಕೊಂಡರು ಎಂಬ ಬಗ್ಗೆಯೂ ತನಿಖೆ ಮುಂದುವರಿದಿದೆ.

ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ನಿಖರ ಕಾರಣ ಹಾಗೂ ಘಟನೆಯ ಸಂಪೂರ್ಣ ವಿವರವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love
Subscribe
Notify of

0 Comments