Home Mangalorean News Kannada News ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್ ! ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ 

ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್ ! ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ 

Spread the love

ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್ ! ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ 

ಬೆಂಗಳೂರು: ದೇಶಾದ್ಯಂತ ಗ್ರಾಹಕರಿಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿವೆ. ಕಳೆದ ಶುಕ್ರವಾರದಂದು (ಮೇ 15) ಇಂಧನ ದರ 3 ರೂ.ನಷ್ಟು ಏರಿಕೆಯಾಗಿತ್ತು. ಇಂದು ಬೆಳ್ಳಂಬೆಳಗ್ಗೆ ಮತ್ತೊಮ್ಮೆ ಪೆಟ್ರೋಲ್, ಡೀಸೆಲ್  ದರ ಪ್ರತಿ ಲೀಟರ್​ಗೆ ಸರಾಸರಿ 90 ಪೈಸೆ ಏರಿಕೆಯಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಒಂದೇ ವಾರದಲ್ಲಿ ಎರಡನೇ ಬಾರಿ ತೈಲ ಬೆಲೆ ಏರಿಕೆಯಾಗಿದ್ದು, ಇದರಿಂದ ಸಾರ್ವಜನಿಕರ ಜೇಬಿಗೆ ಮತ್ತಷ್ಟು ಕತ್ತರಿ ಬಿದ್ದಂತಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 97.77 ರೂ.ನಿಂದ 98.64 ರೂ.ಗೆ ಏರಿಕೆಯಾಗಿದೆ. ಹಾಗೆಯೇ ಡೀಸೆಲ್ ದರ 90.67ರೂ.ನಿಂದ 91.58 ರೂ.ಗೆ ತಲುಪಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ಬೆಲೆ 91 ಪೈಸೆ ಹೆಚ್ಚಳವಾಗುವುದರೊಂದಿಗೆ 107.59ರೂ.ಗೆ ತಲುಪಿದ್ದರೆ, ಡೀಸೆಲ್ ದರ 94 ಪೈಸೆ ಏರಿಕೆಯಾಗಿ 94.08 ರೂ. ತಲುಪಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ದರದಲ್ಲಿ ಗರಿಷ್ಠ 96 ಪೈಸೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಬೆಲೆ 109.70 ರೂ. ಮುಟ್ಟಿದೆ. ಇನ್ನು ಡೀಸೆಲ್ ದರ 94 ಪೈಸೆ ಹೆಚ್ಚಳದೊಂದಿಗೆ 96.07 ರೂ.ಗೆ ಜಿಗಿದಿದೆ. ತಮಿಳುನಾಡಿನ ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 82 ಪೈಸೆ ಹೆಚ್ಚಳವಾಗಿ 104.49 ರೂ. ಹಾಗೂ ಡೀಸೆಲ್ ಬೆಲೆ 86 ಪೈಸೆ ಏರಿಕೆಯಾಗಿ 96.11 ರೂ.ಗೆ ತಲುಪಿದೆ.

ಕೇವಲ ಐದು ದಿನಗಳ ಅಂತರದಲ್ಲಿ ಎರಡು ಬಾರಿ ಇಂಧನ ದರ ಹೆಚ್ಚಳವಾಗಿರುವುದು ಸಾರ್ವಜನಿಕರ ಜೇಬಿಗೆ ಭಾರಿ ಕತ್ತರಿ ಹಾಕಿದೆ. ಸತತ ದರ ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುವ ಆತಂಕ ಎದುರಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.


Spread the love

Exit mobile version