ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಲೋಕಭವನಕ್ಕೆ ತೆರಳಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿ ಪ್ರಭುಶಂಕರ ಅವರಿಗೆ ಸಲ್ಲಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಸ್ತುತ ಬೆಂಗಳೂರಿನಲ್ಲಿ ಇಲ್ಲದಿರುವ ಹಿನ್ನೆಲೆಯಲ್ಲಿ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಹಸ್ತಾಂತರಿಸಿದರು.
ಮುಖ್ಯಮಂತ್ರಿ ನಿವಾಸ ‘ಕಾವೇರಿ’ಯಲ್ಲಿ ನಡೆದ ಉಪಾಹಾರ ಸಭೆಯ ಬಳಿಕ ಸಿದ್ದರಾಮಯ್ಯ ಅವರು ಮಧ್ಯಾಹ್ನ ಲೋಕಭವನಕ್ಕೆ ತೆರಳಿದರು. ಸಚಿವ ಬೈರತಿ ಸುರೇಶ್ ಚಾಲನೆ ಮಾಡುತ್ತಿದ್ದ ಕಪ್ಪು ಬಣ್ಣದ ಕಾರಿನಲ್ಲಿ ಸಿದ್ದರಾಮಯ್ಯ ಅವರು ಪ್ರಯಾಣಿಸಿದರು.
ಲೋಕಭವನದ ಸುತ್ತ ಭಾರೀ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು.
ಆದರೆ ರಾಜ್ಯಪಾಲರ ಕಾರ್ಯದರ್ಶಿಗಳು ರಾಜೀನಾಮೆ ಸ್ವೀಕರಿಸಲು ನಿರಾಕರಿಸಿದರು ಎಂದು ಎಂದು ತಿಳಿದು ಬಂದಿದೆ.













