Home Mangalorean News Kannada News SIR: ನೈಜ ಮತದಾರರಿಗೆ ವಾಸ್ತವ್ಯ ದೃಢೀಕರಣ ಪತ್ರ ನೀಡಲು ಉಡುಪಿ ಬ್ಲಾಕ್ ಕಾಂಗ್ರೆಸ್ ಡಿಸಿಗೆ ಮನವಿ

SIR: ನೈಜ ಮತದಾರರಿಗೆ ವಾಸ್ತವ್ಯ ದೃಢೀಕರಣ ಪತ್ರ ನೀಡಲು ಉಡುಪಿ ಬ್ಲಾಕ್ ಕಾಂಗ್ರೆಸ್ ಡಿಸಿಗೆ ಮನವಿ

Spread the love

SIR: ನೈಜ ಮತದಾರರಿಗೆ ವಾಸ್ತವ್ಯ ದೃಢೀಕರಣ ಪತ್ರ ನೀಡಲು ಉಡುಪಿ ಬ್ಲಾಕ್ ಕಾಂಗ್ರೆಸ್ ಡಿಸಿಗೆ ಮನವಿ

ಉಡುಪಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೈಜ ಮತದಾರರಿಗೆ ವಾಸ್ತವ್ಯ ದೃಢೀಕರಣ ಪತ್ರ ಪಡೆಯುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಲಾಯಿತು.

ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ ಮತದಾರರ ವಿವರಗಳಲ್ಲಿನ ವ್ಯತ್ಯಾಸ ಸೇರಿದಂತೆ ವಿವಿಧ ಕಾರಣಗಳಿಂದ ಹಲವಾರು ಮತದಾರರಿಗೆ ನೋಟಿಸ್ ಜಾರಿಯಾಗಿದೆ. ನೋಟಿಸ್ನಲ್ಲಿ ಸೂಚಿಸಿರುವ ದಾಖಲೆಗಳು ತಮ್ಮ ಬಳಿ ಇಲ್ಲದ ಸಂದರ್ಭಗಳಲ್ಲಿ, ಚುನಾವಣಾ ಆಯೋಗ ಮಾನ್ಯ ಮಾಡುವ ವಾಸ್ತವ್ಯ ದೃಢೀಕರಣ ಪತ್ರ ಪಡೆಯಲು ಸ್ಥಳೀಯ ಕಂದಾಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ ವಿವಿಧ ಕಾರಣಗಳನ್ನು ನೀಡಿ ವಿಳಂಬ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ವಿಶೇಷವಾಗಿ ಬಾಡಿಗೆ ಮನೆಗಳಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ವಾಸಿಸುತ್ತಿರುವವರು, ಸೂಕ್ತ ದಾಖಲೆಗಳನ್ನು ಹೊಂದಿರದವರು ಹಾಗೂ ಹಳೆಯ ದಾಖಲೆಗಳಲ್ಲಿ ವಿಳಾಸ ವ್ಯತ್ಯಾಸ ಹೊಂದಿರುವ ಮತದಾರರು ವಾಸ್ತವ್ಯ ದೃಢೀಕರಣ ಪತ್ರಕ್ಕಾಗಿ ಪ್ರತಿನಿತ್ಯ ಕಂದಾಯ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಮತದಾನದ ಸಾಂವಿಧಾನಿಕ ಹಕ್ಕಿನಿಂದ ಯಾವುದೇ ಅರ್ಹ ನಾಗರಿಕರು ವಂಚಿತರಾಗದಂತೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗದಂತೆ SIR ಪ್ರಕ್ರಿಯೆಗೆ ಸಂಬಂಧಿಸಿದಂತೆ ಅರ್ಹ ನಾಗರಿಕರು ವಾಸ್ತವ್ಯ ದೃಢೀಕರಣ ಪತ್ರಕ್ಕೆ ಅರ್ಜಿ ಸಲ್ಲಿಸಿದ ಕೂಡಲೇ ನಿಯಮಾನುಸಾರ ಪತ್ರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಜಿಲ್ಲಾಧಿಕಾರಿಯವರಲ್ಲಿ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಮಹಾಬಲ ಕುಂದರ್, ಕೃಷ್ಣ ಹೆಬ್ಬಾರ್, ಹರಿಪ್ರಸಾದ್ ರೈ, ಗಣೇಶ್ ನೆರ್ಗಿ, ಸತೀಶ್ ಕೊಡವೂರು, ಸುಕೇಶ್ ಕುಂದರ್, ಸತೀಶ್ ಕುಮಾರ್ ಮಂಚಿ, ಶಶಿರಾಜ್ ಕುಂದರ್, ಲಕ್ಷ್ಮಣ್ ಪೂಜಾರಿ, ಮಮತಾ ಶೆಟ್ಟಿ, ಆಶಾ ಚಂದ್ರಶೇಖರ್, ಸಂಧ್ಯಾ ತಿಲಕ್ರಾಜ್, ಸದಾನಂದ್ ಕುಲಾಲ್, ಆರೀಫ್, ಬೋನಿಫಾಸ್, ಭರತ್ ಕುಮಾರ್, ಶಕುಂತಲಾ, ದಯಾನಂದ್ ಹಾಗೂ ಸಂಜಯ್ ಆಚಾರ್ಯ ಉಪಸ್ಥಿತರಿದ್ದರು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version