ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಸಿಗರೇಟ್ ಮಾರಾಟ: ತೀವ್ರ ಕಾರ್ಯಾಚರಣೆಗೆ ಎಡಿಸಿ ಕೆ. ರಾಜು ಸೂಚನೆ

Spread the love

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಸಿಗರೇಟ್ ಮಾರಾಟ: ತೀವ್ರ ಕಾರ್ಯಾಚರಣೆಗೆ ಎಡಿಸಿ ಕೆ. ರಾಜು ಸೂಚನೆ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡುವ ಹಾಗೂ ಕಾನೂನುಬಾಹಿರವಾಗಿ ಬಿಡಿಬಿಡಿಯಾಗಿ (ಚಿಲ್ಲರೆಯಾಗಿ) ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿ, ಹೋಟೆಲ್, ಕೆಫೆ ಹಾಗೂ ಗೂಡಂಗಡಿಗಳ ವಿರುದ್ಧ ಜಂಟಿ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಕೆ. ರಾಜು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಅವರು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ (ಓಖಿಅP) ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣಕ್ಕಾಗಿ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದರೂ ಸಹ, ಸಾರ್ವಜನಿಕ ಸ್ಥಳಗಳಲ್ಲಿ ಚಿಲ್ಲರೆಯಾಗಿ ಸಿಗರೇಟ್ ಮಾರಾಟ ಮಾಡುತ್ತಿರುವ ಹಾಗೂ ಹೋಟೆಲ್, ಕೆಫೆಗಳಲ್ಲಿ ಗ್ರಾಹಕರಿಗೆ ಧೂಮಪಾನ ಮಾಡಲು ಅವಕಾಶ ನೀಡುತ್ತಿರುವ ಕುರಿತು ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ಪೆÇಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ಜಂಟಿಯಾಗಿ ದಿಢೀರ್ ದಾಳಿಗಳನ್ನು ನಡೆಸಬೇಕು. ಕೋಟ್ಪಾ (ಅಔಖಿPಂ – ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ) ನಿಯಮಗಳನ್ನು ಉಲ್ಲಂಘಿಸುವವರ ಲೈಸನ್ಸ್ ರದ್ದುಗೊಳಿಸುವುದು ಸೇರಿದಂತೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.


Spread the love
Subscribe
Notify of

0 Comments