Home Mangalorean News Kannada News ಉಡುಪಿ ಜಿಲ್ಲೆಯಲ್ಲಿ ಶಸ್ತ್ರಾಸ್ತ್ರಗಳ ವಿಶೇಷ ತಪಾಸಣೆ: ನಾಲ್ಕು ಮಾರ್ಪಾಡು ಮಾಡಲಾದ ಶಸ್ತ್ರಾಸ್ತ್ರ ಪತ್ತೆ

ಉಡುಪಿ ಜಿಲ್ಲೆಯಲ್ಲಿ ಶಸ್ತ್ರಾಸ್ತ್ರಗಳ ವಿಶೇಷ ತಪಾಸಣೆ: ನಾಲ್ಕು ಮಾರ್ಪಾಡು ಮಾಡಲಾದ ಶಸ್ತ್ರಾಸ್ತ್ರ ಪತ್ತೆ

Spread the love

ಉಡುಪಿ ಜಿಲ್ಲೆಯಲ್ಲಿ ಶಸ್ತ್ರಾಸ್ತ್ರಗಳ ವಿಶೇಷ ತಪಾಸಣೆ: ನಾಲ್ಕು ಮಾರ್ಪಾಡು ಮಾಡಲಾದ ಶಸ್ತ್ರಾಸ್ತ್ರ ಪತ್ತೆ

ಉಡುಪಿ: ಜಿಲ್ಲೆಯಲ್ಲಿ ಇತ್ತೀಚೆಗೆ ಶಸ್ತ್ರಾಸ್ತ್ರಗಳ ಬಳಕೆಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾದ್ಯಂತ ಶಸ್ತ್ರಾಸ್ತ್ರ ಹೊಂದಿರುವ ವ್ಯಕ್ತಿಗಳ ಹಿನ್ನೆಲೆ ಹಾಗೂ ಅವರು ಹೊಂದಿರುವ ಶಸ್ತ್ರಾಸ್ತ್ರಗಳ ಸ್ಥಿತಿಗತಿ ಪರಿಶೀಲಿಸುವ ನಿಟ್ಟಿನಲ್ಲಿ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಲಾಗಿದೆ.

ಕಳೆದ ಒಂದು ತಿಂಗಳ ಅವಧಿಯಲ್ಲಿ ನಡೆದ ಈ ವಿಶೇಷ ಕಾರ್ಯಾಚರಣೆಯಲ್ಲಿ ಜಿಲ್ಲಾದ್ಯಂತ ಒಟ್ಟು 2,925 ಶಸ್ತ್ರಾಸ್ತ್ರಗಳನ್ನು ಪರಿಶೀಲಿಸಲಾಗಿದೆ. ಈ ಪೈಕಿ 1,759 SBML, 554 SBBL, 318 DBBL, 6 DBML, 120 ಪಿಸ್ತೂಲ್, 119 ರಿವಾಲ್ವರ್, 30 ರೈಫಲ್, 13 ಬೋರ್ ಗನ್ ಹಾಗೂ 6 NP ಬೋರ್ ಶಸ್ತ್ರಾಸ್ತ್ರಗಳಿವೆ.

ಪರಿಶೀಲನೆಯ ವೇಳೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಒಟ್ಟು ನಾಲ್ಕು ಶಸ್ತ್ರಾಸ್ತ್ರಗಳಲ್ಲಿ ಅನಧಿಕೃತ ಮಾರ್ಪಾಡು ಮಾಡಿರುವುದು ಪತ್ತೆಯಾಗಿದೆ.

ಈ ಸಂಬಂಧ ಶಂಕರನಾರಾಯಣ, ಕೋಟ, ಬ್ರಹ್ಮಾವರ ಹಾಗೂ ಕಾರ್ಕಳ ಟೌನ್ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಅನಧಿಕೃತವಾಗಿ ಶಸ್ತ್ರಾಸ್ತ್ರಗಳಲ್ಲಿ ಮಾರ್ಪಾಡು ಮಾಡಿದ ಆರೋಪಿಗಳ ವಿರುದ್ಧ Indian Arms Act-1959ರ ಕಲಂ 25ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪ್ರಕರಣಗಳು ಪ್ರಸ್ತುತ ತನಿಖಾ ಹಂತದಲ್ಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಲ್ಲದೆ, ಜಿಲ್ಲೆಯಲ್ಲಿ ರೌಡಿ ಹಾಳೆ ಹೊಂದಿರುವ ಹಾಗೂ ಶಸ್ತ್ರಾಸ್ತ್ರ ಪರವಾನಗಿ ಹೊಂದಿರುವ ವ್ಯಕ್ತಿಗಳ ಪ್ರಸ್ತುತ ನಡವಳಿಕೆಯ ಬಗ್ಗೆಯೂ ವಿಶೇಷವಾಗಿ ಪರಿಶೀಲನೆ ನಡೆಸಲಾಗಿದೆ. ಶಸ್ತ್ರಾಸ್ತ್ರ ಪರವಾನಗಿ ಪಡೆದ ಬಳಿಕ ಅವರು ಯಾವುದೇ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆಯೂ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.

ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಶಸ್ತ್ರಾಸ್ತ್ರಗಳ ಅಕ್ರಮ ಬಳಕೆ ಮತ್ತು ಅನಧಿಕೃತ ಮಾರ್ಪಾಡುಗಳ ವಿರುದ್ಧ ಮುಂದಿನ ದಿನಗಳಲ್ಲಿಯೂ ನಿರಂತರ ನಿಗಾ ವಹಿಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ತಿಳಿಸಿದೆ.

ಅನಧಿಕೃತ ಶಸ್ತ್ರಾಸ್ತ್ರ ಬಳಕೆ, ಮಾರ್ಪಾಡು ಅಥವಾ ಸಂಗ್ರಹದ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸಾರ್ವಜನಿಕರು ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಅಥವಾ ಉಡುಪಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

ಕಂಟ್ರೋಲ್ ರೂಂ: 0820-2526444, 0820-2526709
ವಾಟ್ಸಾಪ್: 9480805400

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version