ಪರ್ಯಾಯ ಮಹೋತ್ಸವಕ್ಕೆ ವಿಶೇಷ ಸಹಕಾರ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ ರಮೇಶ್ ಕಾಂಚನ್
ಉಡುಪಿಯಲ್ಲಿ ಜನವರಿ 18 ರಂದು ನಡೆಯಲಿರುವ ಶೀರೂರು ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ 6 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡುವ ನಿಟ್ಟಿನಲ್ಲಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿರುವುದಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಹರ್ಷ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರ್ಯಾಯ ಸಿದ್ದತೆಯ ಬಗ್ಗೆ ಮಾತುಕತೆ ನಡೆಸಿ ಯಾವುದೇ ಕುಂದುಕೊರತೆಯಾಗದಂತೆ ಸರಿಯಾದ ವ್ಯವಸ್ಥೆ ಕಲ್ಪಿಸಲು ಸಮರೋಪಾದಿಯಲ್ಲಿ ಹಗಲು ರಾತ್ರಿ ಕೆಲಸಮಾಡಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರಿಗೆ ವಿಶೇಷ ಸಹಕಾರ ನೀಡುವಂತೆ ರಾಜ್ಯಸರ್ಕಾರಕ್ಕೆ ಮನವಿ ಮಾಡಿಕೊಂಡ ಜಿಲ್ಲೆಯ ಕಾಂಗ್ರೆಸ್ ನಾಯಕರಿಗೆ ರಮೇಶ್ ಕಾಂಚನ್ ಕೃತಜ್ಞತೆ ಸಲ್ಲಿಸಿದ್ದಾರೆ.













