Home Mangalorean News Kannada News ಉಡುಪಿ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ; 32 ಅಕ್ರಮ ಹೋಂಸ್ಟೇ ಪತ್ತೆ

ಉಡುಪಿ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ; 32 ಅಕ್ರಮ ಹೋಂಸ್ಟೇ ಪತ್ತೆ

Spread the love

ಉಡುಪಿ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ; 32 ಅಕ್ರಮ ಹೋಂಸ್ಟೇ ಪತ್ತೆ

ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದ ಹಿನ್ನಲೆಯಲ್ಲಿ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾನೂನು ಸುವ್ಯವಸ್ಥೆ) ಅವರ ನಿರ್ದೇಶನದಂತೆ ಉಡುಪಿ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿದ್ದು, ಜಿಲ್ಲೆಯಲ್ಲಿ 32 ಅಕ್ರಮ ಹೋಂಸ್ಟೇಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಅಕ್ರಮ ಹೋಂಸ್ಟೇಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಗೆ ವರದಿ ಸಲ್ಲಿಸಲಾಗಿದೆ.

ಪೊಲೀಸ್ ಇಲಾಖೆ ಹೋಂಸ್ಟೇ ಮತ್ತು ರೆಸಾರ್ಟ್ಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದು, ಪರವಾನಿಗೆ ನಿಯಮ ಹಾಗೂ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ.

ನಿಯಮಗಳನ್ನು ಪಾಲಿಸದ ಹೋಂಸ್ಟೇ ಹಾಗೂ ರೆಸಾರ್ಟ್ಗಳ ಪರವಾನಿಗೆಯನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಹೋಂಸ್ಟೇ/ರೆಸಾರ್ಟ್ಗಳಿಗೆ ವಿದೇಶಿಗರು ಆಗಮಿಸಿದಲ್ಲಿ, ಅವರ ವಿವರಗಳನ್ನು ಒಳಗೊಂಡ Form-C ಅನ್ನು FRRO (Foreigners Regional Registration Office) ಆನ್ಲೈನ್ ಮೂಲಕ ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು ಹಾಗೂ ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.

ಹೋಂಸ್ಟೇ ಹಾಗೂ ರೆಸಾರ್ಟ್ಗಳಲ್ಲಿ ತಂಗಿರುವ ವಿದೇಶಿಗರ ಭದ್ರತೆ ಕುರಿತಂತೆ ಹೆಚ್ಚಿನ ನಿಗಾ ವಹಿಸಲು ಸಹ ನಿರ್ದೇಶನ ನೀಡಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.


Spread the love

Exit mobile version