Home Mangalorean News Kannada News ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ:  ವ್ಯಕ್ತಿಯ ಬಂಧನ

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ:  ವ್ಯಕ್ತಿಯ ಬಂಧನ

Spread the love

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ:  ವ್ಯಕ್ತಿಯ ಬಂಧನ

  • 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್ ಹಾಗೂ ಮೊಬೈಲ್ ಫೋನ್ ವಶ

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ 27 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಆತನಿಂದ ₹60 ಸಾವಿರ ಮೌಲ್ಯದ 1 ಕೆ.ಜಿ. 206 ಗ್ರಾಂ ಗಾಂಜಾ, KTM ಮೋಟಾರ್ ಸೈಕಲ್ ಹಾಗೂ ಮೊಬೈಲ್ ಫೋನ್‌ನ್ನು ವಶಪಡಿಸಿಕೊಂಡಿದ್ದಾರೆ.

ದಿನಾಂಕ 17-08-2026ರಂದು ಗಾಂಜಾ ಸೇವನೆ ಮಾಡಿದ ಪ್ರಕರಣದಲ್ಲಿ ಆಶ್ವಿನ್ ಕ್ಸೇವಿಯರ್ (24) ಎಂಬಾತನನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಈ ವೇಳೆ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ನಿತಿನ್ ಕೃಷ್ಣನ್ ಎಂಬಾತನ ಬಗ್ಗೆ ಮಾಹಿತಿ ನೀಡಿದ್ದು, ಆತನನ್ನು ತೋರಿಸಿಕೊಡುವುದಾಗಿ ತಿಳಿಸಿದ್ದಾನೆ.

ಈ ಮಾಹಿತಿಯ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದು, ದಿನಾಂಕ 18-08-2026ರಂದು ಕದ್ರಿ ಗ್ರಾಮದ ಪದವು ಮೈದಾನದ ಬಳಿಯ ಆಯುರ್ವೇದ ಕ್ಲಿನಿಕ್‌ನಲ್ಲಿ ಥೆರಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ನಿತಿನ್ ಕೃಷ್ಣನ್ (27) ಎಂಬಾತನನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

ಆತನ ವಶದಲ್ಲಿದ್ದ ₹60,000 ಮೌಲ್ಯದ 1 ಕೆ.ಜಿ. 206 ಗ್ರಾಂ ತೂಕದ ಗಾಂಜಾ, ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್ ಹಾಗೂ ಕೆಎಲ್-86-2397 ನೋಂದಣಿ ಸಂಖ್ಯೆಯ KTM ಮೋಟಾರ್ ಸೈಕಲ್ ಅನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

ಬಂಧಿತನನ್ನು ನಿತಿನ್ ಕೃಷ್ಣನ್ (27) ಎಂದು ಗುರುತಿಸಲಾಗಿದೆ. ಈತ ಕೃಷ್ಣನ್ ಅವರ ಪುತ್ರನಾಗಿದ್ದು, ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ತಾಳಿಪರಂಬ ತಾಲೂಕು, ಚಿರುಪುಝಾ ಗ್ರಾಮದ ಮೂಲ ನಿವಾಸಿಯಾಗಿದ್ದಾನೆ. ಪ್ರಸ್ತುತ ಮಂಗಳೂರಿನ ಕೊಂಚಾಡಿಯ ಶಬರಿ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ನಿತಿನ್ ಕೃಷ್ಣನ್‌ನನ್ನು ಆಗಸ್ಟ್ 18ರಂದು ವಶಕ್ಕೆ ಪಡೆದು ದಸ್ತಗಿರಿ ಕ್ರಮ ಕೈಗೊಳ್ಳಲಾಗಿದೆ. ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.


Spread the love

Exit mobile version