ನ. 27: ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ, ಡೈರಿ ಬಿಡುಗಡೆ ಹಾಗೂ ಸನ್ಮಾನ ಕಾರ್ಯಕ್ರಮ
ಉಡುಪಿ: ಮಹಾಲಕ್ಷ್ಮೀ ಕೋ ಓಪರೇಟಿವ್ ಬ್ಯಾಂಕ್ ಉಡುಪಿ ಇದರ ವತಿಯಿಂದ ಉಡುಪಿ ಜಿಲ್ಲೆಯ (ಉಡುಪಿ, ಕಾಪು, ಬ್ರಹ್ಮಾವರ ತಾಲೂಕು) ವ್ಯಾಪ್ತಿಯ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ ಹಾಗೂ ಸ್ನಾತಕೋತ್ತರ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ, 2027ನೇ ಸಾಲಿನ ಡೈರಿ ಬಿಡುಗಡೆ ಹಾಗೂ ಈ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಮಲ್ಪೆ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಸತೀಶ್ ಕುಂದರ್, ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಜಯರಾಮ ಶೆಟ್ಟಿ, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷರಾದ ಶ್ರೀ ವೈ ಸುಧೀರ್ ಕುಮಾರ್, ಉಡುಪಿ ಜಿಲ್ಲೆಯ ಉತ್ತಮ ಮಹಿಳಾ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತ ಮೀನು ಮಾರಾಟಗಾರರ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಬೇಬಿ ಎಚ್. ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ ಉಡುಪಿಯ ಪುರಭವನದಲ್ಲಿ ನವೆಂಬರ್ 27 ಶುಕ್ರವಾರ ಮಧ್ಯಾಹ್ನ 3.00ಕ್ಕೆ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ತಿಳಿಸಿದ್ದಾರೆ.
ಸಮಾರಂಭದ ಉದ್ಘಾಟನೆಯನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕರಾದ ನಾಡೋಜ ಡಾ| ಜಿ. ಶಂಕರ್ ನೆರವೇರಿಸಲಿದ್ದು, ಬ್ಯಾಂಕಿನ ಅಧ್ಯಕ್ಷರಾದ ಯಶ್ಪಾಲ್ ಎ. ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ| ಎಂ. ಮೋಹನ್ ಆಳ್ವ ರವರು ವಿತರಿಸಲಿದ್ದು, ಬ್ಯಾಂಕಿನ 2027ನೇ ಸಾಲಿನ ಡೈರಿಯನ್ನು ಗೀತಾನಂದ ಫೌಂಡೇಶನ್ ಕೋಟ ಪ್ರವರ್ತಕರಾದ ಶ್ರೀ ಆನಂದ ಸಿ. ಕುಂದರ್ ಬಿಡುಗಡೆ ಮಾಡಲಿದ್ದಾರೆ.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್, ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಮಂಗಳೂರು ಅಧ್ಯಕ್ಷರಾದ ಶ್ರೀ ಮೇಘರಾಜ್ ಆರ್. ಜೈನ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ. ಕೋಟ್ಯಾನ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಶ್ರೀ ನಾರಾಯಣ ಜೆ. ಕರ್ಕೇರ, ಉದ್ಯಮಿ ಶ್ರೀ ಆನಂದ ಪಿ. ಸುವರ್ಣ, ಉಜ್ವಲ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಶ್ರೀ ಅಜಯ್ ಪಿ. ಶೆಟ್ಟಿ, ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
