Home Mangalorean News Kannada News ಸೆ.1 ರಂದು ಮಂಗಳೂರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ

ಸೆ.1 ರಂದು ಮಂಗಳೂರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ

Spread the love

ಸೆ.1 ರಂದು ಮಂಗಳೂರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ

ಮಂಗಳೂರು: ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮಂಗಳೂರು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಮಂಗಳೂರು ತಾಲೂಕು ಇವರ ವತಿಯಿಂದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ ಸೆಪ್ಟೆಂಬರ್ 1 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಜ್ ಮತ್ತು ವಕ್ಫ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್ ಎಂ. ರೇವಣ್ಣ ಗೌರವ ಉಪಸ್ಥಿತರಿರಲಿದ್ದಾರೆ. ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.


Spread the love

Exit mobile version