ರೆಹಮಾನ್ ಕೊಲೆ ಆರೋಪಿಗಳ ಮೇಲಿನ ಗೂಂಡಾ ಕಾಯ್ದೆಯನ್ನು ಸರಕಾರ ಹಿಂಪಡೆದಿದೆ ಎಂಬುದು ಸುಳ್ಳು ಮಾಹಿತಿ: ದ.ಕ. ಜಿಲ್ಲಾ ಎಸ್‌ಪಿ ಸ್ಪಷ್ಟನೆ

Spread the love

ರೆಹಮಾನ್ ಕೊಲೆ ಆರೋಪಿಗಳ ಮೇಲಿನ ಗೂಂಡಾ ಕಾಯ್ದೆಯನ್ನು ಸರಕಾರ ಹಿಂಪಡೆದಿದೆ ಎಂಬುದು ಸುಳ್ಳು ಮಾಹಿತಿ: ದ.ಕ. ಜಿಲ್ಲಾ ಎಸ್‌ಪಿ ಸ್ಪಷ್ಟನೆ

ಮಂಗಳೂರು: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಳತ್ತಮಜಲು ಅಬ್ದುಲ್ ರೆಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರವೇ ಗೂಂಡಾ ಕಾಯ್ದೆಯನ್ನು ಹಿಂಪಡೆದಿದೆ ಎಂಬುದಾಗಿ ಸುಳ್ಳು ಮಾಹಿತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದ್ದು, ಇದು ಸುಳ್ಳು ಮಾಹಿತಿಯಾಗಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಸ್ಪಷ್ಟಪಡಿಸಿದ್ದಾರೆ.

ವಾಸ್ತವವಾಗಿ ಈ ಪ್ರಕರಣದ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯನ್ನು ಅಳವಡಿಸಲು ರಾಜ್ಯ ಸರಕಾರದಿಂದ ಅನುಮೋದನೆ ಪಡೆದು, ಈಗಾಗಲೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಉಚ್ಚ ನ್ಯಾಯಾಲಯದ ಸಲಹಾ ಮಂಡಳಿಯು ಆರೋಪಿಗಳು ಕಳೆದ ಒಂದೂವರೆ ವರ್ಷದಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂಬ ಅಂಶವನ್ನು ಪರಿಗಣಿಸಿ ಅರ್ಜಿಯನ್ನು ಮಾನ್ಯ ಮಾಡಿಲ್ಲ. ಈ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸೆಷನ್ಸ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದನ್ನು ರದ್ದುಗೊಳಿಸುವಂತೆ ಉಚ್ಚ ನ್ಯಾಯಾಲಯದಲ್ಲಿ ಕ್ರಿಮಿನಲ್ ಅರ್ಜಿಯನ್ನು ಸಲ್ಲಿಸಲಾಗಿದೆ. ಆರೋಪಿಗಳಿಗೆ ನೀಡಲಾಗಿರುವ ಜಾಮೀನಿಗೆ ತಡೆಯಾಜ್ಞೆ ನೀಡಲಾಗಿದ್ದು, ಅರ್ಜಿ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.


Spread the love
Subscribe
Notify of

0 Comments