ಮತದಾರರ ಹೆಸರು ಡಿಲಿಟ್ ಮಾಡಲು ಅಭಯ್ ಪಾಟೀಲ್ ಅರ್ಜಿ ವಿಚಾರವನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಲಿ : ಪ್ರಶಾಂತ್ ಜತ್ತನ್ನ

Spread the love

ಮತದಾರರ ಹೆಸರು ಡಿಲಿಟ್ ಮಾಡಲು ಅಭಯ್ ಪಾಟೀಲ್ ಅರ್ಜಿ ವಿಚಾರವನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಲಿ : ಪ್ರಶಾಂತ್ ಜತ್ತನ್ನ

ಉಡುಪಿ: ಎಸ್ ಐಆರ್ ಪ್ರಕ್ರಿಯೆ ವೇಳೆ ಬೆಳಗಾವಿಯಲ್ಲಿ 2000 ಮತದಾರರ ಹೆಸರು ಡಿಲಿಟ್ ಮಾಡಲು ಅಭಯ್ ಪಾಟೀಲ್ ಅರ್ಜಿ ನೀಡಿರುವ ಕುರಿತು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಬಿಡುಗಡೆ ಮಾಡಿರುವ ದಾಖಲೆಯ ಕುರಿತ ವಿಚಾರವನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಕರ್ನಾಟಕ ಕ್ರೈಸ್ತ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಪ್ರಶಾಂತ್ ಜತ್ತನ್ನ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಎಸ್ ಐ ಆರ್ ಕುರಿತು ಪ್ರಕ್ರಿಯೆ ಕೊನೆಯ ಹಂತದಲ್ಲಿದ್ದು ಇಂತಹ ಸಂದರ್ಭದಲ್ಲಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ಬರೆದಿದ್ದಾರೆ ಎನ್ನಲಾದ ಪತ್ರ ಪ್ರಮುಖವಾಗಿ ಅಲ್ಪಸಂಖ್ಯಾತ ಸಮುದಾಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಈಗಾಗಲೇ ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಮತದಾರರ ಹೆಸರು ಡಿಲೀಟ್ ಮಾಡುವ ವಿಚಾರದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ವಿರುದ್ದ ಇತರ ಇಬ್ಬರು ಆಯುಕ್ತರು ಗಂಭೀರವಾದ ಆರೋಪ ಮಾಡಿದ ಬೆನ್ನಲ್ಲೇ ಇಂತಹ ಪತ್ರದ ಕುರಿತು ದಾಖಲೆ ಬಿಡುಗಡೆ ಮಾಡಿರುವುದು ಕಂಡಾಗ ಆಯೋಗದ ಕಾರ್ಯವೈಖ್ಯರಿಯ ಕುರಿತು ಇನ್ನಷ್ಟು ಸಂಶಯ ಮೂಡಲು ಕಾರಣವಾಗುತ್ತಿದೆ.

ಚುನಾವಣಾ ಆಯೋಗ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕಾದ ಸಂಸ್ಥೆಯಾಗಿದ್ದು ಅಂತಹ ಸ್ಥಳದಲ್ಲೇ ಇಂತಹ ಗಂಭೀರ ಆರೋಪಗಳು ಕೇಳಿ ಬಂದರೆ ಇದರಿಂದ ಅಲ್ಪಸಂಖ್ಯಾತ ಸಮುದಾಯ ಸಂವಿಧಾನ ಬದ್ದ ಹಕ್ಕುಗಳಿಂದ ವಂಚಿಸಲ್ಪಡುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಲಕ್ಷಾಂತರ ಮಂದಿ ಅಲ್ಪಸಂಖ್ಯಾತ ಸಮುದಾಯದ ಜನರು ಎಸ್ ಐ ಆರ್ ಪ್ರಕ್ರಿಯೆಯಲ್ಲಿ ರಾಜ್ಯದಾದ್ಯಂತ ತೊಂದರೆ ಅನುಭವಿಸಿದ್ದಾರೆ. ಒಂದೊಮ್ಮೆ ಬಿಜೆಪಿ ಶಾಸಕ ಅಭಯ ಪಾಟೀಲ್ ನೀಡಿರುವ ಪತ್ರ ಸತ್ಯವೇ ಆದಲ್ಲಿ ಈ ವಿಷಯದ ಕರುಇತು ವಿರುದ್ದ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ಮತ್ತು ಶಾಸಕರ ವಿರುದ್ದ ಸೂಕ್ತ ಕ್ರಮಕೈಗೊಳ್ಳಬೇಕು. ಒಂದು ವೇಳೆ ಬಿಜೆಪಿಯ ಕೈಗೊಂಬೆಯಾಗಿ ವರ್ತಿಸಿದರೆ ಮುಂದೆ ಉಗ್ರ ಹೋರಾಟ ಮಾಡುಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.


Spread the love
Subscribe
Notify of

0 Comments