Home Mangalorean News Kannada News ಮೊಗವೀರ ಸಮಾಜದವರು ಶ್ರಮ ಜೀವಿಗಳು, ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು : ಸಚಿವ ಶಿವರಾಜ್ ತಂಗಡಗಿ

ಮೊಗವೀರ ಸಮಾಜದವರು ಶ್ರಮ ಜೀವಿಗಳು, ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು : ಸಚಿವ ಶಿವರಾಜ್ ತಂಗಡಗಿ

Spread the love

ಮೊಗವೀರ ಸಮಾಜದವರು ಶ್ರಮ ಜೀವಿಗಳು, ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು : ಸಚಿವ ಶಿವರಾಜ್ ತಂಗಡಗಿ

ಉಡುಪಿ: ಮೊಗವೀರ ಸಮಾಜದ ಗುರು ಪರಂಪರೆಯ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿಯನ್ನು ಉಚ್ಚಿಲ ಮೊಗವೀರ ಭವನದಲ್ಲಿ ಶುಕ್ರವಾರ ಅನಾವರಣಗೊಳಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ ಅವರು ನೂತನ ಪುತ್ಥಳಿಯನ್ನು ಗಣ್ಯರ ಉಪಸ್ಥಿತಿಯಲ್ಲಿ ಅನಾವರಣಗೊಳಿಸಿದರು.

ಈ ವೇಳೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ ಮೊಗವೀರ ಸಮಾಜದವರು ಶ್ರಮಜೀವಿಗಳಾಗಿದ್ದು, ಸಮುದಾಯದ ಮಕ್ಕಳು ಶಿಕ್ಷಣವಂತರಾಗುವತ್ತ ಗಮನ ಹರಿಸಬೇಕಾಗಿದೆ. ಕರಾವಳಿಯ ಮಣ್ಣಿಗೆ ತನ್ನದೇ ಆದ ಶಕ್ತಿಯನ್ನು ಹೊಂದಿದ್ದು ಮೊಗವೀರ ಕುಲಗುರುಗಳ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಿಳಿಸಬೇಕಾಗಿದೆ. ಉಚ್ಚಿಲ ದಸರಾಗೆ ಸರಕಾರದಿಂದ ಪ್ರತಿವರ್ಷ ರೂ 50 ಲಕ್ಷ ಅನುದಾನವನ್ನು ನೀಡಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಅದನ್ನು ಹೆಚ್ಚಿಸಲು ಪ್ರಯತ್ನ ಮಾಡಲಾಗುವುದು ಎಂದರು

ಕರ್ನಾಟಕ ಸರಕಾರವು ಎಲ್ಲಾ ಸಮುದಾಯಗಳ ಏಳಿಗೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ಬಾಕಿ ಇರುವ ಸರಕಾರದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಲು ಪ್ರಯತ್ನ ಮಾಡಲಾಗುವುದು. ಇಲಾಖೆಯ ವತಿಯಿಂದ ಜಿಲ್ಲೆಯ 92 ಸಂಸ್ಥೆಗಳಿಗೆ ಅಗತ್ಯವಾದ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

ಕರಾವಳಿಯ ಇತಿಹಾಸದಲ್ಲಿ ಮೊದಲ ಬಾರಿಗೆ ಎಂಬಂತೆ ಮುಖ್ಯಮಂತ್ರಿಗಳು ಸಚಿವ ಸಂಪುಟ ನಡೆಸಿ ಈ ಭಾಗದ ಹಲವು ವರ್ಷಗಳ ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ 2 ನೇ ಅಧಿಕೃತ ಭಾಷೆಯ ಮಾನ್ಯತೆ ನೀಡಿರುವುದು ಐತಿಹಾಸಿಕ ಸಂಗತಿಯಾಗಿದೆ. ಕರಾವಳಿಯ ಭಾಷಿಗರು ಪ್ರೀತಿಯಿಂದ ಮಾತನಾಡಿಸುವ ಗುಣವನ್ನು ಹೊಂದಿದ್ದು ತುಳು ಭಾಷೆಗೆ ಈ ಮಾನ್ಯತೆ ದೊರತಿರುವುದು ಹೆಮ್ಮೆಯ ಸಂಗತಿಯಾಗಿದೆ. ಇದರೊಂದಿಗೆ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ ಕೂಡ ಹಣ ಮೀಸಲಿರಿಸಲಾಗಿದ್ದು ಈ ಭಾಗದ ಅಭಿವೃದ್ಧಿಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದರು,

ಪ್ರಾಸ್ತಾವಿಕವಾಗಿ ಮಾತನಾಡಿದ ನಾಡೋಜ ಡಾ. ಜಿ. ಶಂಕರ್ ಅವರು ಸುಮಾರು ಒಂದು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಮೊಗವೀರ ಸಮಾಜದ ಗುರು ಪರಂಪರೆಯ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿಯನ್ನು ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಸ್ಥಾಪಿಸಬೇಕೆಂದು ಅಷ್ಟಮಂಗಲ ಪ್ರಶ್ನೆಯಲ್ಲಿ ತೋರಿ ಬಂದ ಹಿನ್ನೆಲೆಯಲ್ಲಿ, ಮೊಗವೀರ ಸಮಾಜ ಬಾಂಧವರ ಸಂಕಲ್ಪದಂತೆ ಸುಮಾರು ರೂ.3 ಕೋಟಿ ವೆಚ್ಚದಲ್ಲಿ, 31 ಅಡಿ ಎತ್ತರ ಹಾಗೂ ಸುಮಾರು 14 ಸಾವಿರ ಕೆ.ಜಿ. ತೂಕದ ಕಂಚನ್ನು ಬಳಸಿ ಭವ್ಯ ಪುತ್ಥಳಿಯನ್ನು ನಿರ್ಮಿಸಲಾಗಿದೆ. ಸುಮಾರು 6 ಕೋಟಿ ರೂ ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಾಣ ಮಾಡಿದ್ದು, ಪ್ರತಿವರ್ಷ ಅತ್ಯುತ್ತಮ ರೀತಿಯಲ್ಲಿ ದಸರಾ ವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಸರಕಾರದಿಂದ ಕ್ಷೇತ್ರಕ್ಕೆ ಬರಬೇಕಾದ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಹಾಗೂ ಉಚ್ಚಿಲ ದಸರಾಕ್ಕೆ ಸರಕಾರ ಪ್ರತಿ ವರ್ಷ 2 ಕೋಟಿ ರೂ ಗಳನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಸಮುದಾಯದ ಗುರಿಕಾರ ಬಂಧುಗಳಿಗೆ ಧನಸಹಾಯ ವಿತರಣೆ ಮಾಡಲಾಯಿತು. ಉಚ್ಚಿಲ ದಸರಾದ ಸಂದರ್ಭದಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ದೇಹದಾಡ್ಯ ಸ್ಪರ್ಧೆಯ ಪೋಸ್ಟರ್ ಅನಾವರಣ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಸಮುದಾಯದ ಮುಖಂಡರಾದ ಆನಂದ್ ಸಿ ಕುಂದರ್, ಪ್ರಸಾದ್ ರಾಜ್ ಕಾಂಚನ್, ಅಜಿತ್ ಸುವರ್ಣ, ಸಂತೋಷ್ ಪುತ್ರನ್, ಉದಯ್ ಕುಮಾರ್ ಹಟ್ಟಿಯಂಗಡಿ, ವೇದಪ್ರಕಾಶ್ ಶ್ರಿಯಾನ್, ಕವಿತಾ ಶರತ್, ನಾಗರಾಜ್ ಸುವರ್ಣ ಮನೋಜ್ ಸಾಲ್ಯಾನ್ ಉಳ್ಳಾಲ ಹಾಗೂ ಇತರರು ಉಪಸ್ಥಿತರಿದ್ದರು.

ದಕ ಜಿಲ್ಲಾ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್ ಸ್ವಾಗತಿಸಿ ಮನೋಜ್ ಸಾಲ್ಯಾನ್ ವಂದಿಸಿದರು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version